ಕರ್ನಾಟಕ

karnataka

ETV Bharat / state

ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ - Santosh Lad

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ 14 ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಸಲಹೆ, ಸೂಚನೆಗಳನ್ನು ನೀಡಿದರು.

Labor Minister Santosh Lad
ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ: ಕಾರ್ಮಿಕ ಸಚಿವ ಸಂತೋಷ್ ಲಾಡ್

By

Published : Jun 23, 2023, 10:52 PM IST

ಬೆಂಗಳೂರು:ರಾಜ್ಯದ ಕಾರ್ಮಿಕ ವಲಯದ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಹಾಗೂ ಸಂಸ್ಥೆಗಳ ಮಾಲೀಕರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಭೆಗಳನ್ನು ನಡೆಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದರು.

ವಿಕಾಸಸೌಧದಲ್ಲಿ ಇಂದು ಶುಕ್ರವಾರ ಮಾತನಾಡಿದ ಅವರು, 14 ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಭಾರತದ ಶೇ. 90 ಕ್ಕಿಂತ ಹೆಚ್ಚು ಅಸಂಘಟಿತ ಕಾರ್ಮಿಕರಿದ್ದು, ಕರ್ನಾಟಕದಲ್ಲಿ ಶೇ. 85 ಇದ್ದಾರೆ. ಅವರಿಗೆ ಕನಿಷ್ಠ ವೇತನ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಇದನ್ನೂ ಓದಿ:ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ದಿನಾಂಕ ತೀರ್ಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

''ಇತ್ತೀಚಿಗೆ ಪ್ರವರ್ಧಮಾನಕ್ಕೆ ಬಂದಿರುವ ಜೋಮೋಟೊ ಸೇರಿದಂತೆ ಆನ್‍ಲೈನ್‍ ವ್ಯಾಪಾರ ಹೊಸದಾಗಿದ್ದು, ಇದರಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಬಗ್ಗೆ ಸಹ ಚರ್ಚಿಸಲಾಯಿತು. ಸರ್ಕಾರಿ ವ್ಯವಸ್ಥೆಯಲ್ಲಿ ಹೊರ ಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಡಿ’ ಗ್ರೂಪ್‍ ನೌಕರರನ್ನು ಸರ್ಕಾರಿ ವ್ಯವಸ್ಥೆಯಡಿ ತರುವಂತೆ ಬೇಡಿಕೆಗಳನ್ನು ಸ್ವೀಕರಿಸಲಾಗಿದೆ. ಏಜೆನ್ಸಿಗಳು ಹೊರಗುತ್ತಿಗೆ ನೌಕರರಿಗೆ ಸರಿಯಾಗಿ ಸಂಬಳ ನೀಡುವುದಿಲ್ಲ ಎಂಬ ದೂರುಗಳು ಸಹ ಕೇಳಿ ಬಂದಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುವುದು'' ಎಂದು ಹೇಳಿದರು.

ಇದನ್ನೂ ಓದಿ:ಬ್ರ್ಯಾಂಡ್ ಬೆಂಗಳೂರು ಗುರಿ: ಬಸವರಾಜ ಬೊಮ್ಮಾಯಿ ಭೇಟಿಯಾಗಿ ಸಲಹೆ ಪಡೆದ ಡಿ.ಕೆ. ಶಿವಕುಮಾರ್

12ಲಕ್ಷ ಕಟ್ಟಡ ಕಾರ್ಮಿಕರನ್ನು ನೋಂದಣಿ:''ನರೇಗಾ ಕಾರ್ಮಿಕರಿಗೆ ಸೌಲಭ್ಯಗಳ ವಿಸ್ತರಣೆ ಮಾಡಲಾಗುವುದು, ಫಲಾನುಭವಿಗಳ ಗುರುತಿಸುವಿಕೆ ಅತ್ಯಂತ ಜವಾಬ್ಧಾರಿಯುತ ಕೆಲಸವಾಗಿದೆ. ಬೆಂಗಳೂರಿನಲ್ಲಿ ಕಳೆದ ವರ್ಷ 12ಲಕ್ಷ ಕಟ್ಟಡ ಕಾರ್ಮಿಕರನ್ನು ನೋಂದಾಯಿಸಲಾಗಿದೆ. ಟ್ರೈ ಪಾರ್ಟಿ ಅದಾಲತ್ ಮಾಡಿ ಸಲಹೆ ಪಡೆಯಲಾಗುವುದು'' ಎಂದರು.

ಇದನ್ನೂ ಓದಿ:ರಾಜ್ಯದ 15 ವಿದಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಸ್ಕಾಟ್ಲೆಂಡ್‌ ವಿವಿಗೆ: ಸಚಿವ ಎಂ.ಸಿ. ಸುಧಾಕರ್

40 ಲಕ್ಷ ಕಾರ್ಮಿಕರು ನೋಂದಣಿ:''ಇಎಸ್‍ಐ ವ್ಯಾಪ್ತಿಯಲ್ಲಿ ಸುಮಾರು 40 ಲಕ್ಷ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ರಾಜ್ಯದಲ್ಲಿ ಇಎಸ್ಐ ಹೊರತು ಪಡಿಸಿ ಸುಮಾರು 80 ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ'' ಎಂದು ಅವರು ತಿಳಿಸಿದರು. ಇದಕ್ಕೂ ಮುನ್ನ ಸಚಿವರು, ಕಾರ್ಮಿಕ ಸಂಢಟನೆಗಳ ಮುಖಂಡರು, ಪಧಾದಿಕಾರಿಗಳ ಜೊತೆ ಸಮಾಲೋಚನಾ ಸಭೆ ನಡೆಸಿದರು. ಈ ಸಬೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಅಪರ ಕಾರ್ಮಿಕ ಆಯುಕ್ತರಾದ ರವಿಕುಮಾರ್, ಆಂಜನೇಯ, ಕಲ್ಯಾಣ ಆಯುಕ್ತರು, ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಗಳು ಸಚಿವರಿಗೆ ಕಾರ್ಮಿಕರ ಪರ ಅಹವಾಲುಗಳನ್ನು ಸಲ್ಲಿಸಿದರು. ಕಾರ್ಮಿಕರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ವಿನಂತಿಸಿದರು.

ಇದನ್ನೂ ಓದಿ:ಯಾರೊಂದಿಗೂ ಚರ್ಚೆ ಮಾಡದೆ ಸರ್ವಾಧಿಕಾರಿ ರೀತಿ ಪಾಠ ಕೈಬಿಟ್ಟಿದ್ದಾರೆ: ರೋಹಿತ್ ಚಕ್ರತೀರ್ಥ

ABOUT THE AUTHOR

...view details