ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಇಂದು ಕೂಡ ತಮ್ಮ ಕ್ಷೇತ್ರ ವ್ಯಾಪ್ತಿಯ ಬಡವರು ಹಾಗೂ ಕಾರ್ಮಿಕರಿಗೆ ಆಹಾರ ಪೂರೈಸುವ ಕಾರ್ಯ ಮಾಡಿದರು.
ನಗರದ ಬಿಟಿಎಂ ಲೇಔಟ್ ಸುತ್ತಲಿನ ನೂರಾರು ಕಾರ್ಮಿಕರು ಹಾಗೂ ಸ್ಲಂ ನಿವಾಸಿಗಳು ಸೇರಿದಂತೆ ಬಡವರಿಗೆ ಆಹಾರ ವಿತರಿಸಿದರು. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆಹಾರ ವಿತರಿಸುವ ಕಾರ್ಯವನ್ನು ರಾಮಲಿಂಗಾರೆಡ್ಡಿ ಮುಂದುವರೆಸಿದ್ದಾರೆ.
ಮಾಜಿ ಸಚಿವ ರಾಮಲಿಂಗಾರೆಡ್ಡಿಯಿಂದ ಮುಂದುವರೆದ ಆಹಾರ ವಿತರಣೆ ವಿವಿಧ ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಕೆಲ ನಾಯಕರಿಗೆ ಸೂಚನೆ ನೀಡಿದ್ದು, ಬಡಜನರಿಗೆ ಶಕ್ತಿ ಮೀರಿ ಸಹಕಾರ ನೀಡಿ ಎಂದು ಹೇಳಿದೆ. ಅದೇ ಪ್ರಕಾರ ಕಾಂಗ್ರೆಸ್ನ ಮಾಜಿ ಸಚಿವರು, ಶಾಸಕರು, ಮುಖಂಡರು ಹಾಗೂ ಬಿಬಿಎಂಪಿ ಸದಸ್ಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಹಾರ ಪೂರೈಕೆ ಮಾಡುವ ಕಾರ್ಯ ಮುಂದುವರಿಸಿಕೊಂಡು ಸಾಗಿದ್ದಾರೆ.
ಮಾಜಿ ಸಚಿವ ರಾಮಲಿಂಗಾರೆಡ್ಡಿಯಿಂದ ಮುಂದುವರೆದ ಆಹಾರ ವಿತರಣೆ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ರಾಮಲಿಂಗಾರೆಡ್ಡಿ ಹಾಗೂ ಜಯನಗರ ವ್ಯಾಪ್ತಿಯಲ್ಲಿ ಅವರ ಪುತ್ರಿ ಹಾಗೂ ಶಾಸಕಿ ಸೌಮ್ಯರೆಡ್ಡಿ, ಕಾರ್ಮಿಕರಿಗೆ ಉಚಿತವಾಗಿ ಆಹಾರ ವಿತರಿಸುವ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲೆಡೆ ಸಂಚರಿಸಿ ಅಗತ್ಯ ಇರುವವರಿಗೆ ಆಹಾರ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಜೊತೆ ಜೊತೆಗೆ ಅಲ್ಲಲ್ಲಿ ಆಹಾರ ತಯಾರಿಕಾ ಘಟಕಗಳನ್ನು ನಿರ್ಮಿಸಿಕೊಂಡು ಸ್ಥಳದಲ್ಲಿ ಆಗಮಿಸಿದ ನಾಗರಿಕರಿಗೆ ವಿತರಿಸುವ ಕಾರ್ಯವೂ ನಡೆದಿದೆ.
ಲಾಕ್ಡೌನ್ ಸಂದರ್ಭದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬ ಕಾಂಗ್ರೆಸ್ ಪಕ್ಷದ ಸೂಚನೆಯನ್ನು ಹಲವು ನಾಯಕರು ತಮ್ಮ ವ್ಯಾಪ್ತಿಯಲ್ಲಿ ಮುಂದುವರಿಸಿಕೊಂಡು ಸಾಗಿದ್ದಾರೆ. ಮಾಜಿ ಸಚಿವ ಜಮೀರ್ ಅಹಮದ್, ಬಿಬಿಎಂಪಿ ಸದಸ್ಯ ಎಂ.ಶಿವರಾಜ್, ಕೈ ಮುಖಂಡ ಮನೋಹರ್ ಮತ್ತಿತರ ನಾಯಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಕಾರ್ಯವನ್ನು ನಿರಂತರವಾಗಿ ಮುನ್ನಡೆಸಿಕೊಂಡು ಸಾಗಿದ್ದಾರೆ.