ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ವಿಧಾನಸೌಧ ಚಲೋ ಮುಂದುವರೆಸಿದೆ. ಅಂಗನವಾಡಿ ಕೇಂದ್ರಗಳನ್ನು ಅನಿರ್ದಿಷ್ಟ ಕಾಲ ಬಂದ್ ಮಾಡಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುಮಾರು 2 ಸಾವಿರ ಅಂಗನವಾಡಿ ಕಾರ್ಯಕರ್ತರು ಹೋರಾಟ ಮಾಡುತ್ತಿದ್ದಾರೆ. ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ 1000 ರೂ. ಹೆಚ್ಚಿಸಿದರೂ ನೌಕರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ನೌಕರರಲ್ಲಿ 20 ವರ್ಷ ಮೇಲ್ಪಟ್ಟವರಿಗೆ 2 ಸಾವಿರ, 10 ವರ್ಷ ಮೇಲ್ಪಟ್ಟವರಿಗೆ 1500 ರೂ. ಹೆಚ್ಚಳ ಮಾಡಬೇಕು. ಅಂಗನವಾಡಿಲ್ಲಿಯೇ ಎಲ್.ಕೆ.ಜಿ ಮತ್ತು ಯು.ಕೆ.ಜಿ ನಡೆಸಬೇಕು. ಎನ್.ಇ.ಪಿ ಶಿಫಾರಸ್ಸುಗಳನ್ನು ಜಾರಿ ಮಾಡಬಾರದೆಂದು ಪ್ರತಿಭಟಿಸಲಾಗುತ್ತಿದೆ ಎಂದು ಎ.ಐ.ಟಿ.ಯು.ಸಿ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ತಿಳಿಸಿದ್ದಾರೆ.
ಇಲಾಖೆಯ ಶಿಫಾರಸ್ಸಿನಂತೆ 339.48 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕು. ಅಂಗನವಾಡಿ ನೌಕರರ ಕೇಂದ್ರಗಳ ಮೇಲ್ವಿಚಾರಣೆ ಗ್ರಾಮ ಪಂಚಾಯ್ತಿಗಳಿಗೆ ಕೊಡಬಾರದು. ನಿವೃತ್ತಿಯಾದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಜೀವನ ನಡೆಸಲು ಪೆನ್ಶನ್ ಜಾರಿ ಮಾಡಬೇಕು. ಮಿನಿ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ರಾಜ್ಯದ ಮಕ್ಕಳು, ತಾಯಂದಿರಿಗೆ ಪೌಷ್ಟಿಕ ಆಹಾರ ಪೂರೈಕೆ: ಸೂಕ್ತ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ