ಬೆಂಗಳೂರು :ರಾಜಧಾನಿಯಲ್ಲಿ ನಿನ್ನೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಹ ಮುಂದುವರೆದಿದೆ. ಸಂಜೆ 4 ಗಂಟೆಯಿಂದ ಪ್ರಾರಂಭವಾದ ಭಾರಿ ಮಳೆಯಿಂದ ನಗರದ ತಗ್ಗು ಪ್ರದೇಶಗಳೆಲ್ಲ ಭರ್ತಿಯಾಗಿವೆ. ವಸಂತನಗರ, ರಾಜಾಜಿನಗರ, ಮಲೇಶ್ವರಂ ಸೇರಿದಂತೆ ಹಲವೆಡೆ ಗುಡುಗು ಸಹಿತ ವರ್ಷಧಾರೆಯಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ : ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು - Silicon City Rain News
ರಾಜಧಾನಿಯಲ್ಲಿ ಇಂದು ಸಂಜೆಯಿಂದ ಎಡೆಬಿಡದೇ ಭಾರಿ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಬಡಾವಣೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಈ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ..
ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ
ಆರ್ ಆರ್ ನಗರ, ಬಿಟಿಎಂಲೇಔಟ್, ಬಸವನಗುಡಿ, ಯಶವಂತಪುರ, ಪೀಣ್ಯದಲ್ಲಿ ಗಾಳಿ ಸಹಿತ ಭಾರಿ ಮಳೆ ಸುರಿದ ವರದಿಯಾಗಿದೆ. ಸಾಯಂಕಾಲದಿಂದ ಸಿಲಿಕಾನ್ ಸಿಟಿಯಲ್ಲಿ ತಣ್ಣಗಿನ ವಾತಾವರಣ ಅನುಭವವಾಗುತ್ತಿದೆ. ಹಲವು ಬಡಾವಣೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ.
ಕರಾವಳಿ ಜಿಲ್ಲೆಗಳಗಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು, ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಎಡೆಬಿಡದೇ ಸುರಿಯುತ್ತಿದೆ. ರಾಜಧಾನಿಯಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.