ಬೆಂಗಳೂರು: ಕೊರೊನಾ ವಾರಿಯರ್ಸ್ಗಳಾದ ನಮ್ಗೆ ನಿಮ್ಮ ಚಪ್ಪಾಳೆ ಬೇಡ. ಬದಲಿಗೆ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಎಂದು ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಹೋರಾಟಕ್ಕೆ ಇಳಿದಿದ್ದಾರೆ.
ಕೆಲಸಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟ ಗುತ್ತಿಗೆ ನೌಕರರು - ಹೊರ ಗುತ್ತಿಗೆ ನೌಕರರ ಪ್ರತಿಭಟನೆ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಹೋರಾಟಕ್ಕಿಳಿದಿದ್ದಾರೆ.
ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕರೆ ಕೊಟ್ಟ ಗುತ್ತಿಗೆ ನೌಕರರು..
ಕಳೆದ ಮೂರು ದಿನದಿಂದ ಕೆಲಸಕ್ಕೆ ಹಾಜಾರಾಗಿ ಪ್ರತಿಭಟಿಸಿದ್ದರು. ಆದರೆ ಸರ್ಕಾರ ಗಮನ ಕೊಡದೇ ಇದ್ದ ಕಾರಣ ಮನೆಯಲ್ಲಿಯೇ ಇದ್ದು ಅನಿರ್ದಿಷ್ಟಾವಧಿಗೆ ಪ್ರತಿಭಟನೆ ಆರಂಭಿಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸೇವಾ ಭದ್ರತೆ ಒದಗಿಸಬೇಕು. 10-15 ವರ್ಷದಿಂದ ಒಂದೇ ಕಡೆ ಕೆಲಸ ವರ್ಗಾವಣೆ ಇಲ್ಲ. ಹೊರ ಗುತ್ತಿಗೆ ಪದ್ಧತಿ ಕೈ ಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸುಮಾರು 30 ಸಾವಿರಕ್ಕೂ ಹೆಚ್ಚು ನೌಕರರು ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿದ್ದಾರೆ.