ಕರ್ನಾಟಕ

karnataka

ETV Bharat / state

40 ಪರ್ಸೆಂಟ್​ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿ ನಾಲ್ವರು ಅರೆಸ್ಟ್​ - ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೇರಿ ನಾಲ್ವರು ಅರೆಸ್ಟ್​ - ಸಚಿವ ಮುನಿರತ್ನ ಮತ್ತು ಸರ್ಕಾರದ ವಿರುದ್ಧ 40 ಪರ್ಸೆಂಟ್​ ಆರೋಪ ಮಾಡಿದ್ದ ಕೆಂಪಣ್ಣ - ಪ್ರಧಾನಿ ಕಚೇರಿಗೂ ಪತ್ರ ಬರೆದಿದ್ದ ಕೆಂಪಣ್ಣ

Kempanna and three others arrested in Bengaluru
40 ಪರ್ಸೆಂಟ್​ ಆರೋಪ ಮಾಡಿದ್ದ ಕೆಂಪಣ್ಣ ಸೇರಿ ನಾಲ್ವರು ಅರೆಸ್ಟ್​

By

Published : Dec 24, 2022, 11:07 PM IST

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಶೇ.40 ರಷ್ಟು ಭ್ರಷ್ಟಾಚಾರ ಆರೋಪ ಮಾಡಿದ್ದಲ್ಲದೆ, ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧವೂ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿ ನಾಲ್ವರನ್ನು ಕೇಂದ್ರ ವಿಭಾಗದ ವೈಯಾಲಿಕಾವಲ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಡಿ. ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಕೃಷ್ಣಾರೆಡ್ಡಿ, ನಟರಾಜ್, ಗುರುಸಿದ್ದಪ್ಪ ಎಂಬವರನ್ನು ಬಂಧಿಸಲಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಉಪಾಧ್ಯಕ್ಷ ಕೃಷ್ಣಾಾರೆಡ್ಡಿ, ಖಜಾಂಚಿ ನಟರಾಜ್ ಸೇರಿ ಇತರೆ ಆರೋಪಿಗಳು ಸಚಿವ ಮುನಿರತ್ನ ವಿರುದ್ಧ ಮಾಧ್ಯಮ ಹೇಳಿಕೆ ನೀಡಿದ್ದರು. ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದರು.

ಈ ಸಂಬಂಧ ಸಚಿವ ಮುನಿರತ್ನ ಕೋರ್ಟ್‌ನಲ್ಲಿ ಕ್ರಿಮಿನಲ್ ಮತ್ತು 50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ನೋಟಿಸ್ ಕೊಟ್ಟು ಡಿ.22ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ಡಿ.22ರ ವಿಚಾರಣೆಗೆ ಆರೋಪಿಗಳು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನಗರದ 8ನೇ ಎಸಿಎಂಎಂ ಕೋರ್ಟ್ ಕೆಂಪಣ್ಣ ಸೇರಿ 19 ಮಂದಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಈ ಬೆನ್ನಲ್ಲೇ ಕೆಂಪಣ್ಣ ಹಾಗೂ ಇತರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

For All Latest Updates

TAGGED:

ABOUT THE AUTHOR

...view details