ಬೆಂಗಳೂರು:ಬಿಬಿಎಂಪಿ ಮಹಿಳಾ ಅಕೌಂಟ್ಸ್ ಸೂಪರಿಂಡೆಂಟ್ ಕಿರುಕುಳ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬಿಬಿಎಂಪಿ ಅಧಿಕಾರಿಯಿಂದ ಕಿರುಕುಳ ಆರೋಪ: ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ
ಗಿರೀಶ್ (36) ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಜಯನಗರದ ಬಿಬಿಎಂಪಿ ಅಕೌಂಟ್ ಸೂಪರಿಂಡೆಂಟ್ ಉಷಾ ಬಳಿ ಜಯನಗರ ಪಾರ್ಕ್ ನಿರ್ವಹಣೆಯ ಗುತ್ತಿಗೆ ನೀಡುವಂತೆ ಗಿರೀಶ್ ಕೇಳಿದ್ದ. ಈ ವೇಳೆ ಅವರು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಗಿರೀಶ್ (36) ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಜಯನಗರದ ಬಿಬಿಎಂಪಿ ಅಕೌಂಟ್ ಸೂಪರಿಂಡೆಂಟ್ ಉಷಾ ಬಳಿ ಜಯನಗರ ಪಾರ್ಕ್ ನಿರ್ವಹಣೆಯ ಗುತ್ತಿಗೆ ನೀಡುವಂತೆ ಗಿರೀಶ್ ಕೇಳಿದ್ದ. ಈ ವೇಳೆ ಅವರು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಆತ ತನ್ನ ಕಾರಿನ ದಾಖಲೆಗಳನ್ನು ನೀಡಿದ್ದ ಆದರೆ ಕಳೆದ ಒಂದು ವಾರದಿಂದ ಉಷಾ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಷ್ಟು ಮಾತ್ರವಲ್ಲದೇ ಹಣ ನೀಡಲು ನಿರಾಕರಿಸಿದಕ್ಕೆ ಗಿರೀಶ್ ವಿರುದ್ದ ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಆರೋಪವಿದೆ. ಹೀಗಾಗಿ ಸದ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ತಾಳಲಾರದೆ ಗುತ್ತಿಗೆದಾರ ಕಾರಿನಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.