ಬೆಂಗಳೂರು:ಕೊರೊನಾ ರೂಪಾಂತರ ವೈರಸ್ ತಡೆಯಲು ಸರ್ಕಾರಕ್ಕೆ ಅಗತ್ಯ ಸಹಕಾರ ನೀಡುವಂತೆ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಕೊರೊನಾ ರೂಪಾಂತರ ಹರಡದಂತೆ ತಡೆಯಲು, ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೆ ತಪಾಸಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ವೈರಸ್ ಹರಡದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರು ಕಿಂಚಿತ್ತೂ ನಿರ್ಲಕ್ಷ್ಯ ಮಾಡದೆ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಸಹಕರಿಸಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಶಾಕಿಂಗ್: ಯುಕೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದ ಇಬ್ಬರಿಗೆ ಕೊರೊನಾ ದೃಢ
ಇನ್ನು ಈಗಾಗಲೇ ಬ್ರಿಟನ್ನಿಂದ ವಾಪಸ್ಸಾದವರ ಮಾಹಿತಿ ಪಡೆದು ಅವರನ್ನು ಐಸೋಲೇಷನ್ಗೆ ಒಳಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಈ ಬಗ್ಗೆ ಕೆ ಸುಧಾಕರ್ ಮಾಹಿತಿ ನೀಡಿದ್ದು, ಬ್ರಿಟನ್ನಿಂದ ಬಂದವರನ್ನು ಕಡ್ಡಾಯವಾಗಿ ಆರ್ಟಿಪಿಎಸ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ ಯುಕೆಯಿಂದ 2127 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದು ವಿಮಾನ ನಿಲ್ದಾಣದಲ್ಲಿಯೇ ಒಂದೇ ದಿನ 852 ಪ್ರಯಾಣಿಕರನ್ನ ತಪಾಸಣೆ ಗೊಳಪಡಿಸಲಾಗಿದೆ. ಇನ್ನು ರಾಜ್ಯದಲ್ಲಿ ಕೋವಿಡ್ ರೂಪಾಂತರ ಹೆಚ್ಚು ಸದ್ದು ಮಾಡುತ್ತಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.