ಕರ್ನಾಟಕ

karnataka

ETV Bharat / state

ಮಂಥನ್ ಶಿಬಿರ ಯಶಸ್ವಿಗೊಳಿಸಲು ಸಹಕಾರ ಅಗತ್ಯ: ಸಿಎಂ ಬೊಮ್ಮಾಯಿ

ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಸೆಪ್ಟೆಂಬರ್ 8 ಮತ್ತು 9 ರಂದು ಮಂಥನ್ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಿದೆ. ಈ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು.

Video interaction with Minister Nitin Gadkari by CM
ಸಚಿವ ನಿತಿನ್ ಗಡ್ಕರಿ ಸಿಎಂ ಜೊತೆ ವಿಡಿಯೋ ಸಂವಾದ

By

Published : Jul 27, 2022, 10:02 PM IST

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ನಡೆಯಲಿರುವ 2 ದಿನಗಳ ಮಂಥನ್ ಶಿಬಿರ ಹಾಗೂ 41ನೇ ಸಾರಿಗೆ ಅಭಿವೃದ್ಧಿ ಮಂಡಳಿ ಸಭೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲಾಗುವುದು. ಶಿಬಿರದ ಆಯೋಜನೆಯ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಸೆಪ್ಟೆಂಬರ್ 8 ಮತ್ತು 9 ರಂದು ಮಂಥನ್ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಿದೆ. ಈ ಕುರಿತು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ವಿಡಿಯೋ ಸಂವಾದ ನಡೆಸಿದರು.

ಸಚಿವ ನಿತಿನ್ ಗಡ್ಕರಿ ಸಿಎಂ ಜೊತೆ ವಿಡಿಯೋ ಸಂವಾದ

ಬಳಿಕ ಮಾತನಾಡಿದ ಸಿಎಂ, ಕರ್ನಾಟಕ ಸರ್ಕಾರದ ಹಲವಾರು ಬಾಕಿ ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇತ್ಯರ್ಥಗೊಳಿಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ರಾಜ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಗಳ ಎಲ್ಲ ಯೋಜನೆಗಳನ್ನು ತೀವ್ರಗತಿಯಲ್ಲಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು. ಮೋಟರು ವಾಹನಗಳ ಕಾಯ್ದೆಯ ಅನುಷ್ಠಾನದಲ್ಲಿರುವ ಕೆಲವು ಸಮಸ್ಯೆಗಳಿಗೆ ಹೊಸ ಪರಿಹಾರಗಳನ್ನು ಮಂಥನ್ ಶಿಬಿರದಲ್ಲಿ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:Praveen Murder.. ಕೇಸ್ ಎನ್ಐಎಗೆ ವಹಿಸಲು ಹಿಂದೆ ಮುಂದೆ ನೋಡಲ್ಲ: ಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ, ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ರಸ್ತೆ ನಿರ್ಮಾಣದ ಅಜೆಂಡಾ ಸಿದ್ಧವಿಸಿಕೊಳ್ಳಲು ಸೂಚಿಸಿದರು. ಬಾಕಿ ಇರುವ ಬೈಪಾಸ್ ಹಾಗೂ ವರ್ತುಲ ರಸ್ತೆಗಳ ವಿಷಯಗಳ ಬಗ್ಗೆ ಶಿಬಿರದಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರಬಹುದಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.

ABOUT THE AUTHOR

...view details