ಕರ್ನಾಟಕ

karnataka

ETV Bharat / state

ನಗರ ಪ್ರದೇಶಗಳ ಇಂಟರ್ನೆಟ್ ಸೇವೆ ಮತ್ತಷ್ಟು ಬಲಪಡಿಸಲು ಸಹಕಾರ : ಸಿಎಂಗೆ ರಾಜೀವ್ ಚಂದ್ರಶೇಖರ್ ಅಭಯ - Cooperation to further strengthen the Internet service of urban areas

ಕೌಶಲ್ಯಾಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದರು. ಟಯರ್ 2 ಸಿಟಿಗಳಲ್ಲಿ ಇಂಟರ್ನೆಟ್ ಸೇವೆ ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಿದ್ದು, ರಾಜ್ಯಕ್ಕೆ ಕೇಂದ್ರದಿಂದ ಅಗತ್ಯ ನೆರವು ಕಲ್ಪಿಸುವ ಭರವಸೆ ನೀಡಿದರು..

Cooperation to further strengthen the Internet service of urban areas: rajeev chandrasekhar
Cooperation to further strengthen the Internet service of urban areas: rajeev chandrasekhar

By

Published : Aug 20, 2021, 8:02 PM IST

ಬೆಂಗಳೂರು: ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಇಂಟರ್ನೆಟ್ ಸೇವೆ ಬಲಪಡಿಸಲು ರಾಜ್ಯ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಭರವಸೆ ನೀಡಿದರು.

ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದಿಸಿ ಉಡುಗೊರೆಯಾಗಿ ಕೃತಿಯೊಂದನ್ನು ನೀಡಿದರು.

ನಂತರ ಕೆಲಕಾಲ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಕೌಶಲ್ಯಾಭಿವೃದ್ಧಿ ಕುರಿತು ಸಮಾಲೋಚನೆ ನಡೆಸಿದರು. ಟಯರ್ 2 ಸಿಟಿಗಳಲ್ಲಿ ಇಂಟರ್ನೆಟ್ ಸೇವೆ ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಿದ್ದು, ರಾಜ್ಯಕ್ಕೆ ಕೇಂದ್ರದಿಂದ ಅಗತ್ಯ ನೆರವು ಕಲ್ಪಿಸುವ ಭರವಸೆ ನೀಡಿದರು.

ABOUT THE AUTHOR

...view details