ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಜುಲೈ 6ರಿಂದ ಇಲಾಖೆ ವೆಬ್‌ಸೈಟ್‌ನಿಂದ ಪ್ರತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಏಪ್ರಿಲ್ 22ಕ್ಕೆ ಪಿಯುಸಿ ಪರೀಕ್ಷೆ ಆರಂಭವಾಗಿ ಮೇ.18ಕ್ಕೆ ಮುಗಿದಿತ್ತು. ಜೂನ್ 18ರಂದು ಫಲಿತಾಂಶ ಪ್ರಕಟವಾಗಿದೆ. ಉತ್ತರ ಪತ್ರಿಕೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.