ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು 6 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಂಗಳೂರಿನ ಮೇಲೆ ಕೊರೊನಾ ಕರಿಛಾಯೆ...ಇಂದು 6 ಜನರಲ್ಲಿ ಕೊರೊನಾ - bangalore latest news
ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಜನರ ನಿದ್ದೆಗೆಡಿಸಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು 6 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜಾಜಿನಗರದ ಮಹಾಗಣಪತಿ ವಾರ್ಡ್ನ 23 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ 9 ಮಂದಿ ಬಂದಿದ್ದು, ಕ್ವಾರಂಟೈನ್ ಮಾಡಲಾಗಿತ್ತು. ಆಗ ಈತನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತ ಕ್ವಾರಂಟೈನಲ್ಲಿ ಇದ್ದ ಕಾರಣ ರಾಜಾಜಿನಗರವನ್ನ ಕಂಟೈನ್ಮೆಂಟ್ ಜೋನ್ ಮಾಡುವ ಪ್ರಶ್ನೆ ಬರುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಕ್ವಾರಂಟೈನ್ನಲ್ಲಿದ್ದ 23 ವರ್ಷದ ಮಹಿಳೆಗೆ ಹಾಗೂ 4 ವರ್ಷದ ಗಂಡು ಮಗುವಿಗೂ ಸೋಂಕು ತಗುಲಿದೆ ಎನ್ನಲಾಗಿದೆ. ಸದ್ಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇನ್ನು ದೊಮ್ಮಲೂರು, ಹಲಸೂರು, ಎಂ.ಜಿ ರಸ್ತೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದ ಮೂವರಿಗೂ ಸೋಂಕು ತಗುಲಿದ್ದು, ಹೊರ ರಾಜ್ಯ, ವಿದೇಶದಿಂದ ಬಂದವರೇ ಎಂಬ ಮಾಹಿತಿ ಪತ್ತೆಯಾಗಿಲ್ಲ. ಒಟ್ಟಾರೆ, ಇಂದು 6 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ.