ಕರ್ನಾಟಕ

karnataka

ETV Bharat / state

ಇಂದಿನಿಂದ ರಾಜ್ಯದ 5 ಜಿಲ್ಲೆಗಳಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ ಆರಂಭ - ಕೋವಿಡ್ ಓಡಿಸಲು ವ್ಯಾಕ್ಸಿನ್ ಅಸ್ತ್ರದ ಪ್ರಯೋಗ

ಕರ್ನಾಟಕದಲ್ಲಿ ಕೊರೊನಾ ವ್ಯಾಕ್ಸಿನೇಷನ್​​​‌ ಡ್ರೈ ರನ್​ ಇಂದು ಆರಂಭವಾಗಲಿದ್ದು, ಇದಕ್ಕಾಗಿ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.

corona-dry-run-to-start
5 ಜಿಲ್ಲೆಗಳಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ ಆರಂಭ

By

Published : Jan 1, 2021, 4:59 PM IST

Updated : Jan 2, 2021, 3:43 AM IST

ಬೆಂಗಳೂರು: ಕೋವಿಡ್ ಓಡಿಸಲು ವ್ಯಾಕ್ಸಿನ್ ಅಸ್ತ್ರದ ಪ್ರಯೋಗಕ್ಕೆ ಸರ್ಕಾರ ಮುಂದಾಗಿದೆ. ಇಂದಿನಿಂದ ಕೋವಿಡ್ ವ್ಯಾಕ್ಸಿನ್​ ಡ್ರೈ ರನ್ ಆರಂಭವಾಗ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಕಲ ತಯಾರಿ ಮಾಡಿಕೊಂಡಿದ್ದು, ಲಕ್ಷಾಂತರ ಮಂದಿ ಈ ವ್ಯಾಕ್ಸಿನ್​ಗಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ಮೊದಲ ಹಂತದಲ್ಲಿ ಅಸ್ಸೋಂ ಸೇರಿದಂತೆ 4 ರಾಜ್ಯಗಳಲ್ಲಿ ಕೋವಿಡ್ ವ್ಯಾಕ್ಸಿನ್​ ಡ್ರೈ ರನ್ ಮಾಡಲಾಗಿತ್ತು. ಇದು ಯಶಸ್ವಿಯಾದ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ 2ನೇ ಹಂತದಲ್ಲಿ ಡ್ರೈ ರನ್​ಗೆ ಕೌಂಟ್​ಡೌನ್ ಶುರುವಾಗಿದೆ. ಇದಕ್ಕಾಗಿ ರಾಜ್ಯದ 5 ಜಿಲ್ಲೆಗಳಾದ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ರಾಷ್ಟ್ರಾದ್ಯಂತ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಡ್ರೈ ರನ್

ಒಟ್ಟು 6.22 ಲಕ್ಷ ಜನರು ವ್ಯಾಕ್ಸಿನೇಷನ್​ಗೆ ನೋಂದಣಿ ಮಾಡಿಕೊಂಡಿದ್ದಾರೆ. ಡ್ರೈ ರನ್ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ನಡೆಯಲಿದೆ. ಈ ಮೂಲಕ ಕೊರೊನಾ ವ್ಯಾಕ್ಸಿನೇಷನ್ ಮಾಡುವಾಗ ಎದುರಾಗುವ ಸಮಸ್ಯೆಗಳ ಬಗ್ಗೆಯೂ ಗಮನಹರಿಸಲಾಗುತ್ತದೆ.

ಆರೋಗ್ಯ ಸಿಬ್ಬಂದಿಯಿಂದ ಪ್ರತಿ ಹಂತದಲ್ಲಿ 25 ಜನರಿಗೆ ಕೊರೊನಾ ವ್ಯಾಕ್ಸಿನ್ ನೀಡಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

Last Updated : Jan 2, 2021, 3:43 AM IST

ABOUT THE AUTHOR

...view details