ಬೆಂಗಳೂರು: ಲಾಕ್ಡೌನ್ ನಂತರ ಸುಧಾರಣಾ ಹಂತಕ್ಕೆ ತಲುಪುವ ಹೊತ್ತಿಗೆ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕಾ ಅಭಿವೃದ್ಧಿಗೆ ತೊಡಕು ಉಂಟು ಮಾಡುತ್ತಿದೆ ಎಂದು ಪೀಣ್ಯ ಕೈಗಾರಿಕಾ ಸಂಘ ಅಧ್ಯಕ್ಷ ಪ್ರಕಾಶ್ ಹೇಳಿದರು.
ಸುಧಾರಣಾ ಹಂತಕ್ಕೆ ತಲುಪುವ ಹೊತ್ತಿಗೆ ಕಚ್ಚಾ ವಸ್ತುಗಳ ಬೆಲೆ ಏರಿಕೆ - coronavirus update
ಅನ್ಲಾಕ್ ನಂತರ ಕಚ್ಚಾ ವಸ್ತುಗಳ ಬೆಲೆ ಗಗನಕ್ಕೆ ತಲುಪಿದ್ದು, ಸ್ಟೀಲ್, ಫ್ಲೈವುಡ್ ಹಾಗೂ ಇತರ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಪಿಐಎ ಅಧ್ಯಕ್ಷ ಪ್ರಕಾಶ್ ಮಾಹಿತಿ ನೀಡಿದರು.
ಸ್ಟೀಲ್, ಫ್ಲೈವುಡ್ ಹಾಗೂ ಇತರ ವಸ್ತುಗಳ ಬೆಲೆ ಹೆಚ್ಚಾಗಿದ್ದು, ಉತ್ಪಾದನಾ ವಸ್ತುಗಳ ವೆಚ್ಚದಲ್ಲಿ ಏರಿಕೆ ಕಂಡಿದೆ. ಆದರೆ, ಈ ಬೆಲೆ ಏರಿಕೆ ದೊಡ್ಡ ಸಂಸ್ಥೆಗಳು ಒಪ್ಪುವುದಿಲ್ಲ. ಇದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಂಕಷ್ಟ ಅನುಭವಿಸುತ್ತಿದೆ ಎಂದು ತಿಳಿಸಿದರು.
ಹೀಗೆ ಪರಿಸ್ಥಿತಿ ಮುಂದುವರಿದರೆ ಮತ್ತೊಮ್ಮೆ ಕೈಗಾರಿಕೆಳು ತೀವ್ರ ಸಂಕಷ್ಟಕ್ಕೆ ಸಿಲುಕುವ ಸಂದರ್ಭ ಎದುರಾಗಬಹುದು. ಬ್ಯಾಂಕುಗಳು ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಬೇಕು. ಜೊತೆಗೆ ವಿದ್ಯುತ್ ದರ ಕೂಡ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿ ಮಾಡಿದರು.