ಕರ್ನಾಟಕ

karnataka

ಕೊರೊನಾ ಎಫೆಕ್ಟ್.. ಗ್ರಾಪಂಗಳಿಗೆ ನಡೆಯಬೇಕಿದ್ದ ಚುನಾವಣೆ ಮುಂದೂಡಿಕೆ.. ಸಚಿವ ಈಶ್ವರಪ್ಪ

By

Published : Apr 7, 2020, 6:34 PM IST

ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ ಸಿಕ್ಕಿದೆ. ಕೊರೊನಾ ಸಮಸ್ಯೆ ಮುಗಿದ ಬಳಿಕ ಹೊಸ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಯನ್ವಯ ಚುನಾವಣೆ ನಡೆಸಲಾಗುತ್ತದೆ.

Minister Eshwarappa
ಸಚಿವ ಈಶ್ವರಪ್ಪ

ಬೆಂಗಳೂರು :ಕೊರೊನಾ ಸಮಸ್ಯೆ ಮುಗಿದ ಬಳಿಕ ಹೊಸ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಯನ್ವಯ ಗ್ರಾಮ ಪಂಚಾಯತ್‌ ಚುನಾವಣೆ ನಡೆಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಗ್ರಾಮ ಪಂಚಾಯತ್‌ ಚುನಾವಣೆ ಕುರಿತಂತೆ ಸಚಿವ ಕೆ ಎಸ್‌ ಈಶ್ವರಪ್ಪ ಸ್ಪಷ್ಟನೆ..

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಬಗ್ಗೆ ಸರ್ಕಾರದಿಂದ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ ಸಿಕ್ಕಿದೆ ಎಂದರು. ಕೊರೊನಾ ಸಮಸ್ಯೆ ಮುಗಿದ ಬಳಿಕ ಹೊಸ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಯನ್ವಯ ಚುನಾವಣೆ ನಡೆಸಲಾಗುತ್ತದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೂ ಮನವಿ ಮಾಡಲಾಗಿದೆ ಎಂದರು.

ABOUT THE AUTHOR

...view details