ಕರ್ನಾಟಕ

karnataka

ETV Bharat / state

ರಾಜ್ಯ ಪೊಲೀಸ್ ಇಲಾಖೆಗೆ ಕೊರೊನಾ ಕಾಟ: ಈವರೆಗೆ 5214 ಕೇಸ್ ದಾಖಲು - ಕೊರೊನಾ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸೋಂಕಿಗೆ ಗುರಿಯಾದವರ ಸಂಖ್ಯೆ 5214ಕ್ಕೆ ಏರಿಕೆಯಾಗಿದ್ದು, ಈಗಾಗಲೇ 2183 ಗುಣಮುಖರಾಗಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ
ರಾಜ್ಯ ಪೊಲೀಸ್ ಇಲಾಖೆ

By

Published : Aug 25, 2020, 3:05 PM IST

ಬೆಂಗಳೂರು: ಕೊರೊನಾ ವಾರಿಯರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತರುವ ಪೊಲೀಸರಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಸದ್ಯ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸೋಂಕಿಗೆ ಗುರಿಯಾದವರ ಸಂಖ್ಯೆ 5214ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 1755 ಕೇಸ್​ಗಳಿದ್ದು, ಅದರಲ್ಲಿ 1520 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೆಯೇ ರಾಜ್ಯದಲ್ಲಿ‌ ಒಟ್ಟಾರೆ 2183 ಗುಣಮುಖರಾಗಿದ್ದಾರೆ. ಇನ್ನು ಈವರೆಗೆ ಬೆಂಗಳೂರಿನಲ್ಲಿ ಕೊರೊನಾದಿಂದಾಗಿ 13 ಮಂದಿ ಸಾವಿಗೀಡಾಗಿದ್ದು, ರಾಜ್ಯದಲ್ಲಿ 23 ಮಂದಿ ಸಾವಿಗೀಡಾಗಿದ್ದಾರೆ.

ಸದ್ಯ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕ, ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಮುಂಜಾಗೃತ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.

ABOUT THE AUTHOR

...view details