ಬೆಂಗಳೂರು:ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈಗಾಗಲೇ ಬೆಂಗಳೂರಿನಲ್ಲಿ 68 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ, ನಗರ ಪ್ರದೇಶಗಳಲ್ಲಿ ಹೆಚ್ಚು ಫೀವರ್ ಕ್ಲಿನಿಕ್ ಸ್ಥಾಪಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಕೊರೊನಾ ಉಲ್ಬಣ: ನಗರ ಪ್ರದೇಶಗಳಲ್ಲಿ ಮತ್ತಷ್ಟು ಜ್ವರ ತಪಾಸಣೆ ಆಸ್ಪತ್ರೆಗಳ ಸ್ಥಾಪನೆ - ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು
ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮತ್ತಷ್ಟು ಫೀವರ್ ಕ್ಲಿನಿಕ್ ಸ್ಥಾಪಿಸುವಂತೆ ಆರೋಗ್ಯ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಫೀವರ್ ಕ್ಲಿನಿಕ್ ಸ್ಥಾಪನೆ
ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ 31 ಫೀವರ್ ಕ್ಲಿನಿಕ್ ಗಳು ಸ್ಥಾಪನೆಯಾಗಿದ್ದು, ನಗರ ಪ್ರದೇಶಗಳಲ್ಲಿ ನಾಳೆಯೊಳಗೆ 50 ಫೀವರ್ ಕ್ಲಿನಿಕ್ಗಳ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ.