ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಎರಡನೇ ಅಲೆ ಹೊಡೆತಕ್ಕೆ ಮೈಕೋ ಲೇಔಟ್ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಒಂದೇ ರಸ್ತೆಯ ಎಂಟು ಮನೆಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮೈಕೋ ಲೇಔಟ್ನ 10ನೇ ಎ ಕ್ರಾಸ್ನಲ್ಲಿ 8 ಮನೆಗಳಲ್ಲಿನ ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಸಂಪೂರ್ಣ ರಸ್ತೆಯನ್ನ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ.