ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಸ್ಥಿರವಾಗಿದ್ದು, ಇಂದು 1,240 ಜನರು ಸೋಂಕಿಗೆ ತುತ್ತಾಗಿದ್ದಾರೆ. 22 ಜನರು ಮೃತರಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,51,844ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 37,361ಕ್ಕೆ ತಲುಪಿದೆ.
1,252 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 28,96,079ಕ್ಕೆ ಏರಿಕೆಯಾಗಿದೆ. ಪ್ರಸ್ತುತ 18,378 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.74ರಷ್ಟಿದ್ದರೆ, ಸಾವಿನ ಪ್ರಮಾಣ ಶೇ 1.77ರಷ್ಟಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಸ್ಥಿರ ಬೆಂಗಳೂರು ನಗರದಲ್ಲಿ 319, ದಕ್ಷಿಣ ಕನ್ನಡ 264, ಉಡುಪಿ ಜಿಲ್ಲೆಯಲ್ಲಿ 111 ಜನರು ಹೊಸದಾಗಿ ಸೋಂಕಿಗೆ ತುತ್ತಾಗಿದ್ದಾರೆ. ಹಾವೇರಿ ಮತ್ತು ಬೀದರ್‌ನಲ್ಲಿ ಯಾವುದೇ ಸೋಂಕಿನ ಪ್ರಕಣಗಳು ವರದಿಯಾಗಿಲ್ಲ.
ಸೆಪ್ಟೆಂಬರ್ 2 ರಂದು 19 ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ. ಇನ್ನುಳಿದ ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಒಂದಂಕಿ ದಾಟಿಲ್ಲ. ಇಂದು ರಾಜ್ಯದಲ್ಲಿ 1,65,386 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 30,567 ಜನರಿಗೆ ರ್ಯಾಪಿಡ್ ಹಾಗೂ 1,34,819 ಜನರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ.