ಬೆಂಗಳೂರು:ತರಕಾರಿ ಮಾರುಕಟ್ಟೆ, ಎಪಿಎಂಸಿಯಲ್ಲಿ ದುಡಿಯುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ನಗರದಲ್ಲಿ ಭೀತಿ ಹುಟ್ಟಿಸಿದೆ.
ತರಕಾರಿ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದವನಿಗೆ ಕೊರೊನಾ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಆತಂಕ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮಲ್ಲೇಶ್ವರಂ ವಾರ್ಡ್ನಲ್ಲಿ ವ್ಯಕ್ತಿಗೆ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ.
ಮಲ್ಲೇಶ್ವರಂ ವಾರ್ಡ್ ವ್ಯಾಪ್ತಿಗೆ ಬರುವ ಯಶವಂತಪುರದ ನಿವಾಸಿ 48 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಲಾಕ್ಡೌನ್ ಬಳಿಕ ಯಶವಂತಪುರದ ಎಪಿಎಂಸಿ ಮಾರುಕಟ್ಟೆಯನ್ನು ಆನೇಕಲ್ಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಗೆ ಹೋಗಿ ಈ ವ್ಯಕ್ತಿ ಕೆಲಸ ಮಾಡುತ್ತಿದ್ದ. ತೀವ್ರ ಜ್ವರ, ಕೆಮ್ಮು, ಶೀತ ಕಾಣಿಸಿಕೊಂಡ ಹಿನ್ನೆಲೆ ಇಎಸ್ಐ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಸೋಂಕಿತ ವ್ಯಕ್ತಿಯ ಪತ್ನಿ ಹಾಗೂ ಮಗ ಇಬ್ಬರನ್ನೂ ಕ್ವಾರಂಟೈನ್ ಮಾಡಲಾಗಿದೆ. ಈತನ ಮನೆ ಮುಂದಿನ ರಸ್ತೆಯನ್ನು ಕಂಟೇನ್ಮೆಂಟ್ ಮಾಡಲಾಗಿದೆ. ಈತನ ಸಂಪರ್ಕಿತರು, ಎಪಿಎಂಸಿಯಲ್ಲಿ ಪ್ರತಿನಿತ್ಯ ಭೇಟಿಯಾಗುತ್ತಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಲ್ಲೇಶ್ವರಂ ವಾರ್ಡ್ನಲ್ಲಿ ಈವರೆಗೆ ಒಟ್ಟು ನಾಲ್ಕು ಪಾಸಿಟಿವ್ ಪ್ರಕರಣ ದಾಖಲಾಗಿವೆ.