ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಪರಿಸ್ಥಿತಿಯಲ್ಲಿ ನ್ಯಾಯಾಂಗ ವ್ಯವಸ್ಥೆ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ವಕೀಲರು ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆಗೆ ನಿಗದಿಪಡಿಸಲು ಕೋರಿ ಮನವಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ಅವರು ಮನವಿ ಮಾಡಿದ್ದಾರೆ.
ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠದ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 25 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ. 45 ಮಂದಿ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಈವರೆಗೆ 7 ನ್ಯಾಯಾಂಗ ಅಧಿಕಾರಿಗಳಿಗೆ ಸೋಂಕು ತಗುಲಿದ್ದು, 74 ಜನ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ. 54 ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, 139 ಮಂದಿ ಕ್ವಾರಂಟೈನ್ನಲ್ಲಿದ್ದಾರೆ.