ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಎಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಪರಿಸ್ಥಿತಿ, ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ವಿವಿಧ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಜೊತೆ ಏಕಕಾಲದಲ್ಲಿ ನೇರವಾಗಿ ಸಮಾಲೋಚಿಸಿದ ಡಿಕೆಶಿ ಆಯಾ ಭಾಗದಿಂದ ರಾಜ್ಯ ಸರ್ಕಾರಕ್ಕೆ ನೀಡಬಹುದಾದ ಸಲಹೆಗಳು ಏನಾದರೂ ಇದ್ದರೆ ವಿವರಿಸಿ ಎಂದು ಕೇಳಿ ಮಾಹಿತಿ ಪಡೆದರು. ರಾಜ್ಯದ 12 ಜಿಲ್ಲೆಗಳಲ್ಲಿ ಇದುವರೆಗೂ ಕೊರೊನಾ ಸೋಂಕು ಹರಡಿಲ್ಲ. ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಕಾಣದ ಜಿಲ್ಲೆಯ ಮುಖಂಡರಿಂದ ಕೈಗೊಳ್ಳಲಾದ ಕ್ರಮಗಳ ಸಂಬಂಧ ಮಾಹಿತಿ ಪಡೆದವರು ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಯಾವ ರೀತಿಯ ನಿಯಂತ್ರಣ ಸಾಧಿಸಬಹುದು ಎಂಬ ಕುರಿತು ಆ ಭಾಗದ ಅಧ್ಯಕ್ಷರ ಜೊತೆ ಸಮಾಲೋಚಿಸಿದರು.