ನೆಲಮಂಗಲ:ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಗುಡ್ ಬೈ ಹೇಳಿ ತಮ್ಮ ಊರುಗಳಿಗೆ ಜನ ತೆರಳುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಕೊರೊನಾ ಭೀತಿ ಹಿನ್ನೆಲೆ ಮಹಾನಗರ ಬಿಡುತ್ತಿರುವ ಜನತೆ: ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ - ಕೊರೊನಾ ವೈರಸ್ ಹಾವಳಿ
ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಬೆಂಗಳೂರು ಬಿಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರ ಈಗಾಗಲೇ ಮನೆಯಿಂದ ಹೊರಗೆ ಹೋಗದಂತೆ ಎಚ್ಚರಿಕೆ ನೀಡಿದೆ. ಆದರೆ ಜನರು ತಮ್ಮ ಊರುಗಳತ್ತ ಪಯಣ ಬೆಳೆಸುತ್ತಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ, ಬೆಂಗಳೂರು ಬಿಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರ ಈಗಾಗಲೇ ಮನೆಯಿಂದ ಹೊರಗೆ ಹೋಗದಂತೆ ಎಚ್ಚರಿಕೆ ನೀಡಿದೆ. ಆದರೆ ಜನರು ತಮ್ಮ ಊರುಗಳತ್ತ ಪಯಣ ಬೆಳೆಸುತ್ತಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಟೋಲ್ಗಳಲ್ಲಿ ಕಿಲೋ ಮೀಟರ್ ದೂರ ಟ್ರಾಫಿಕ್ ಜಾಮ್ ಉಂಟಾಗಿದೆ. ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಬಂದ್ ಮಾಡಿದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಕಾರು, ಬೈಕ್ಗಳಲ್ಲಿ ಕುಟುಂಬ ಸಮೇತ ಪ್ರಯಾಣ ಮಾಡುತ್ತಿರುವ ನಗರ ನಿವಾಸಿಗಳು, ಮಳೆಯ ನಡುವೆಯೂ ತಮ್ಮ ಊರುಗಳಿಗೆ ತೆರಳುತ್ತಿರುವ ದೃಶ್ಯ ಕಂಡುಬಂದಿದೆ. ಮಾರ್ಚ್ 31ರವರೆಗೆ ಬೆಂಗಳೂರು ಸಿಟಿ ಲಾಕ್ ಡೌನ್ ಆಗಿರುವುದರಿಂದ ತಮ್ಮ ಊರುಗಳಿಗೆ ಮರುಳುತ್ತಿದ್ದಾರೆ.