ಕೊರೊನಾ ರೋಗಿಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು: ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ - ರಾಜ್ಯದಲ್ಲಿ ಕೊರೊನಾ ಪ್ರಕರಣ
ಕೋವಿಡ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಬೇಕು. ಪ್ರತಿ ಆಸ್ಪತ್ರೆಗಳಿಗೂ ಪ್ರತಿದಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ಕೋವಿಡ್ -19 ಪಾಸಿಟಿವ್ ರೋಗಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೋವಿಡ್ ರೋಗಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿಲ್ಲ ಎನ್ನುವ ದೂರುಗಳು ಕೇಳಿಬಂದ ಹಿನ್ನಲೆ ದೂರವಾಣಿ ಕರೆ ಮೂಲಕ ಅಧಿಕಾರಿಗಳ ಜೊತೆ ಸಿಎಂ ಮಾತುಕತೆ ನಡೆಸಿದರು.
ಆಸ್ಪತ್ರೆಯಲ್ಲಿ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತಿದೆ, ಚಿಕಿತ್ಸೆಯಲ್ಲಿ ಕೊರತೆಗಳೇನಾದರೂ ಇವೆಯೇ ಎನ್ನುವುದನ್ನು ಪರಿಶೀಲಿಸಬೇಕು. ಜೊತೆಗೆ ಗುಣಮಟ್ಟದ ಆಹಾರ,ಕುಡಿಯುವ ನೀರು ಸೇರಿದಂತೆ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.