ಬೆಂಗಳೂರು: ಕಳೆದೊಂದು ವಾರದಿಂದ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆಯಾ ಅನ್ನುವ ಆತಂಕ ಶುರುವಾಗಿದೆ. ಇಂದು ಬೆಂಗಳೂರಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರ ವರದಿ ಬರಲಿದ್ದು, ಕ್ವಾರಂಟೈನ್ನಲ್ಲಿದ್ದವರು, ಕಂಟೈನ್ಮೆಂಟ್ ಝೋನ್ನಲ್ಲಿದ್ದವರು ಹಾಗೂ ವಿದೇಶಿ ಪ್ರಯಾಣಕರು ಸೇರಿದಂತೆ ಹಲವರ ವರದಿ ಬರಲಿದೆ.
ಇಂದು ಸಾವಿರಕ್ಕೂ ಹೆಚ್ಚು ಮಂದಿ ವರದಿ: ರಾಜ್ಯದಲ್ಲಿ ಅಬ್ಬರಿಸಲಿದೆಯಾ ಕೊರೊನಾ..? - ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು
ಇಂದು ಬೆಂಗಳೂರಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರ ವರದಿ ಬರಲಿದ್ದು, ಬೆಂಗಳೂರು ಹೊರತು ಪಡಿಸಿ ಬೇರೆ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಆತಂಕವಿದೆ.
ಮಧ್ಯಾಹ್ನದೊಳಗೆ ಒಂದು ಬ್ಯಾಚ್ನಲ್ಲಿರುವವರ ವರದಿ ಕೈ ಸೇರಲಿದ್ದು, ಬೆಂಗಳೂರು ಹೊರತು ಪಡಿಸಿ ಬೇರೆ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಇತ್ತ ಬೆಂಗಳೂರಿನಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಶ್ವಾಸಕೋಶದ ಸಮಸ್ಯೆಯಿದ್ದ 48 ವರ್ಷದ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ.
ದಾವಣಗೆರೆಯಿಂದ ಬಂದಿದ್ದ ಮಹಿಳೆ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಮೊನ್ನೆಯಷ್ಟೇ ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನ ಹೆಬ್ಬಾಳದಲ್ಲಿರುವ ಆಸ್ಟರ್ ಆಸ್ಪತ್ರೆಗೆ ಬಂದಿದ್ದು, ಈ ವೇಳೆ ಸ್ವಾಬ್ ತೆಗೆದುಕೊಳ್ಳಲಾಗಿತ್ತು. ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ರಾತ್ರಿಯೇ ಸೋಂಕಿತ ಮಹಿಳೆಯನ್ನು ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದ್ದು, ಮಹಿಳೆಯೊಂದಿಗೆ ಬಂದಿದ್ದ ಮೂವರನ್ನು ಕೆ.ಜಿ. ಜನರಲ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.