ಬೆಂಗಳೂರು:ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಅಜಯ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಶಾಸಕರು ಕ್ವಾರಂಟೈನ್ನಲ್ಲಿದ್ದು, ತಮಗೆ ಸೋಂಕು ದೃಢಪಟ್ಟಿರುವ ವಿಷಯವನ್ನು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಡಾ.ಅಜಯ್ ಧರಂ ಸಿಂಗ್ಗೆ ತಗುಲಿದ ಕೊರೊನಾ ಸೋಂಕು - ಅಜಯ್ ಸಿಂಗ್ಗೆ ತಗುಲಿದ ಕೊರೊನಾ
ಜೇವರ್ಗಿ ಶಾಸಕ ಡಾ.ಅಜಯ್ ಧರಂ ಸಿಂಗ್ಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಶಾಸಕ ಅಜಯ್ ಸಿಂಗ್
ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಎಸಿಮ್ಟಮಾಟಿಕ್ ಆಗಿರುವ ನಾನು ಮುಂದಿನ ಎರಡು ವಾರಗಳ ಕಾಲ ಕ್ವಾರಂಟೈನ್ನಲ್ಲಿ ಇರಲಿದ್ದೇನೆ. ಇನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಕುಣಿಗಲ್ ಶಾಸಕ ರಂಗನಾಥ್ ಮತ್ತು ಅವರ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್ಗೆ ಸೋಂಕು ತಗುಲಿದೆ.