ಬೆಂಗಳೂರು: ಮಾಜಿ ಸಚಿವ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಹಾರೈಸಿದ್ದಾರೆ.
ರೇಣುಕಾಚಾರ್ಯಗೆ ಕೊರೊನಾ ದೃಢ: ಶೀಘ್ರ ಗುಣಮುಖರಾಗುವಂತೆ ಬಿಜೆಪಿ ನಾಯಕರ ಹಾರೈಕೆ - banglore Corona Positive for Renukacharya m.p renukacharya
ಮಾಜಿ ಸಚಿವ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಹಾರೈಸಿದ್ದಾರೆ.
ಹೊನ್ನಾಳಿ ಕ್ಷೇತ್ರದ ಶಾಸಕ, ನನ್ನ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.