ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ಸದ್ಯ ಸಾಮಾನ್ಯ ದಿನಗಳಿಗೆ ಮರಳಲು ಸಾಕಷ್ಟು ಸಮಯಾವಕಾಶ ಬೇಕಿದೆ. ಇದರ ನಡುವೆ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರೈಲ್ವೆ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ.
ಸೋಂಕು ಹೇಗೆ ತಗುಲಿದೆ ಎಂಬ ಬಗ್ಗೆ ಪತ್ತೆ ಕಾರ್ಯ ಮುಂದುವರೆದಿದ್ದು, ಟ್ರಾವೆಲ್ ಹಿಸ್ಟರಿ ಆತಂಕ ಮೂಡಿಸಿದೆ. ಯಾಕೆಂದರೆ ಕಳೆದ ಮೂರು ದಿನದ ಹಿಂದಷ್ಟೇ ಹೆಬ್ಬಾಳ ರೈಲ್ವೆ ನಿಲ್ದಾಣದಿಂದ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ನಲ್ಲಿರುವ ಡಿಆರ್ಎಂ ಕಚೇರಿಗೆ ಬಂದು ಹೋಗಿದ್ದಾರೆ. ಸದ್ಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಲ್ಲೂ ಆತಂಕ ಮೂಡಿದ್ದು, ಭಯದಲ್ಲೇ ಕಚೇರಿಗೆ ಆಗಮಿಸುತ್ತಿದ್ದಾರೆ.