ಬೆಂಗಳೂರು:ಇಂದು ಬೆಳಿಗ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ನನಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ, ಆದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ ಹೇಳಿದ್ದಾರೆ.
ಶಾಸಕ ಬಂಡೆಪ್ಪ ಕಾಶೆಂಪುರ ಅವರಿಗೆ ಕೊರೊನಾ ಪಾಸಿಟಿವ್... - corona detected to MLA Bandeppa Kashempura
ನನಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪುರ ಹೇಳಿದ್ದಾರೆ.
ಶಾಸಕ ಬಂಡೆಪ್ಪ ಖಾಶೆಂಪುರ
ಕಳೆದ 4-5 ದಿನಗಳಿಂದ ನನ್ನ ನೇರ ಸಂಪರ್ಕ ಹೊಂದಿರುವ ಎಲ್ಲರಿಗೂ ತಪಾಸಣೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ತಾಯಿ ಭವಾನಿ ಮಾತೆ ಆಶೀರ್ವಾದ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗಿ ಬಂದು ಸದಾ ನಿಮ್ಮ ಸೇವೆಗೆ ಸಿದ್ಧ ಇರುತ್ತೇನೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.