ಬೆಂಗಳೂರು :ರಾಜ್ಯದಲ್ಲಿಂದು 1,08,534 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 3202 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,24,297ಕ್ಕೆ ಏರಿಕೆ ಆಗಿದೆ.
ಇತ್ತ ಇಂದು 8,988 ಮಂದಿ ಡಿಸ್ಜಾರ್ಜ್ ಆಗಿದ್ದು, 38,45,903 ಮಂದಿ ಗುಣಮುಖರಾಗಿದ್ದಾರೆ. ಇಂದು 38 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 39,613ಕ್ಕೆ ಏರಿಕೆ ಆಗಿದೆ. ಸದ್ಯ 38,747 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 2.95% ರಷ್ಟಿದ್ದರೆ, ಸಾವಿನ ಪ್ರಮಾಣ 1.18% ರಷ್ಟಿದೆ.
ವಿಮಾನ ನಿಲ್ದಾಣದಿಂದ ಇಂದು 960 ಮಂದಿ ಸೇರಿದಂತೆ ಇದುವರೆಗೂ 6,64,973 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. ಹೈ ರಿಸ್ಕ್ ದೇಶಗಳಿಂದ ಇಂದು 400 ಪ್ರಯಾಣಿಕರು ಆಗಮಿಸಿದ್ದಾರೆ. 12 ಜಿಲ್ಲೆಯಲ್ಲಿಂದು ಯಾವುದೇ ಹೊಸ ಸಾವಿನ ಪ್ರಕರಣ ವರದಿಯಾಗಿಲ್ಲ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1,293 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,69,809 ಕ್ಕೆ ಏರಿಕೆ ಆಗಿದೆ. 3,833 ಮಂದಿ ಇಂದು ಬಿಡುಗಡೆಯಾಗಿದ್ದು, ಇದುವರೆಗೂ 17,37,367 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು 10 ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,762ಕ್ಕೆ ಏರಿದೆ. ಇನ್ನು 15,679 ಸಕ್ರಿಯ ಪ್ರಕರಣಗಳಿವೆ.
ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದು ಕೊಂಚ ನಿರಾಳತೆಯನ್ನು ತರಿಸಿದೆ. ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಹಿಂಪಡೆದ ನಂತರ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ನಗರದಲ್ಲಿ ಸಾಮಾನ್ಯ ದಟ್ಟಣೆ ಪರಿಸ್ಥಿತಿ ಗೋಚರಿಸುತ್ತಿದೆ.
ಹೋಟೆ್ಲ್ಗಳು ಗ್ರಾಹಕರನ್ನು ಕಾಣುತ್ತಿವೆ. ಚಿತ್ರಮಂದಿರ ಶೇಕಡ ನೂರರಷ್ಟು ಆಸನದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮಾಲ್ಗಳು ಮಲ್ಟಿಪ್ಲೆಕ್ಸ್ ಗಳಲ್ಲಿಯೂ ಜನ ಕಾಣಿಸುತ್ತಿದ್ದಾರೆ.