ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪ್ರತಿ ದಿನಕ್ಕೆ ಎರಡು ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ನಾನಾ ಪ್ರಯೋಗಗಳನ್ನು ಮಾಡುತ್ತಿದೆ.
ಬೆಂಗಳೂರಿನಲ್ಲಿ ಪ್ಲಾಸ್ಮಾ ದಾನಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಆರು ದಿನಗಳಲ್ಲಿ 50ಕ್ಕೂ ಹೆಚ್ಚು ಮಂದಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಈಗಾಗಲೇ 150 ಮಂದಿ ಪ್ಲಾಸ್ಮಾ ದಾನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಎಲ್ಲರಿಗೂ ಸಮಯಕ್ಕೆ ತಕ್ಕಂತೆ ಬರುವಂತೆ ಸೂಚಿಸಲಾಗಿದೆ.