ಬೆಂಗಳೂರು: ರಾಜ್ಯದಲ್ಲಿ ದಿನದ ಕೋವಿಡ್ ಸಕ್ರಿಯ ಪ್ರಕರಣದಲ್ಲಿ ಭಾರಿ ಇಳಿಕೆ ಕಂಡುಬಂದಿದ್ದು, ನಿನ್ನೆಗೆ ಹೋಲಿಸಿದರೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಸುಮಾರು 10 ಸಾವಿರ ವ್ಯತ್ಯಾಸ ಕಂಡುಬಂದಿದೆ.
ಕರ್ನಾಟಕದಲ್ಲಿ 38,083 ಕೋವಿಡ್ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36,92,496 ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 67,236 ಎಂದು ಅರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 33,25,001 ಮಂದಿಯಾಗಿದ್ದರೆ, ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,28,711 ಕ್ಕೆ ತಲುಪಿದೆ. 49 ಮಂದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,754 ಆಗಿದೆ.
ಒಮಿಕ್ರಾನ್ ಅಪ್ಡೇಟ್: