ಬೆಂಗಳೂರು: ಕೊರೊನಾ ಸೋಂಕು ತಗುಲಿದೆ ಎಂದು ದೃಢಪಡಿಸಿಕೊಳ್ಳಲು ಈಗಾಗಲೇ ರಾಜ್ಯದ ಹಲವು ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಗಳು ಕಾರ್ಯನಿರ್ವಹಿಸುತ್ತಿವೆ.
ಭಾರತೀಯ ವಾಯುಸೇನೆಯಿಂದ ಕೊರೊನಾ ಟೆಸ್ಟಿಂಗ್ ಲ್ಯಾಬ್ ಆರಂಭ - Corona Testing Lab Launches by Indian Air Force
ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ವಾಯುಸೇನೆಯು ನಗರದಲ್ಲಿ ಟೆಸ್ಟಿಂಗ್ ಲ್ಯಾಬ್ ಆರಂಭಿಸಿದೆ.
ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ವಾಯುಸೇನೆಯು ನಗರದಲ್ಲಿ ಟೆಸ್ಟಿಂಗ್ ಲ್ಯಾಬ್ ಆರಂಭಿಸಿದೆ. ಹೆಚ್ಎಎಲ್ ಏರ್ ಪೋರ್ಟ್ ರಸ್ತೆಯಲ್ಲಿರುವ ಕಮಾಂಡ್ ಆಸ್ಪತ್ರೆಯಲ್ಲಿ ಐಎಎಫ್ ನ ಮೊದಲ ಕೊರೊನಾ ವೈರಸ್ ಟೆಸ್ಟಿಂಗ್ ಲ್ಯಾಬ್‌ನ್ನು ಆರಂಭಿಸಲಾಗಿದೆ.
ಬೆಂಗಳೂರು ಸೇರಿದಂತೆ ನೆರೆಹೊರೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರೆ ತ್ವರಿತವಾಗಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಶೀಘ್ರವಾಗಿ ವರದಿ ನೀಡಲು ಅನುಕೂಲವಾಗಲಿದೆ. ಸದ್ಯ ಭಾರತೀಯ ವಾಯುಸೇನೆ ಸೇರಿದಂತೆ ದೇಶದ 9 ನೆಲೆಗಳಲ್ಲಿ ತಲಾ 200-ರಿಂದ 300 ಹಾಸಿಗೆಗಳ ದಿಗ್ಬಂಧನ ಕೇಂದ್ರಗಳನ್ನು ತೆರೆಯಲಾಗಿದೆ.