ಬೆಂಗಳೂರು:ರಾಜ್ಯದಲ್ಲಿಂದು 368 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,45,638ಕ್ಕೆ ಏರಿಕೆ ಆಗಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 12,267ಕ್ಕೆ ಏರಿಕೆಯಾಗಿದೆ. 430 ಮಂದಿ ಗುಣಮುಖರಾಗಿದ್ದು, ಒಟ್ಟು 9,27,580 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.
ಸದ್ಯ ಸಕ್ರಿಯ ಪ್ರಕರಣಗಳು 5772 ಇದ್ದು, 128 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಕರಣಗಳ ಶೇಕಡವಾರು 0.87ರಷ್ಟು ಇದ್ದರೆ, ಮೃತ ಪಟ್ಟವರ ಪ್ರಮಾಣ ಶೇ 0.54ರಷ್ಟು ಇದೆ. ಯುಕೆಯಿಂದ 84 ಮಂದಿ ಇಂದು ಆಗಮಿಸಿದ್ದು, ಈವರೆಗೆ 63 ಜನಕ್ಕೆ ಪಾಸಿಟಿವ್ ಬಂದಿದೆ. ಈ ಸೋಂಕಿತರ ಸಂಪರ್ಕದಲ್ಲಿದ್ದ 26 ಮಂದಿಗೂ ಕೊರೊನಾ ದೃಢಪಟ್ಟಿದೆ. 25 ಜನರಿಗೆ ರೂಪಾಂತರ ಕೊರೊನಾ ಹರಡಿದೆ.