ಬೆಂಗಳೂರು:ರಾಜ್ಯದಲ್ಲಿ ಇಂದು 4,537 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ 59,652ಕ್ಕೆ ಸೋಂಕಿತರ ಸಂಖ್ಯೆ ಏರಿದೆ. 24 ಗಂಟೆಯಲ್ಲಿ 93 ಜನರು ಕೊರೊನಾಗೆ ಬಲಿಯಾಗಿದ್ದು, ಇಲ್ಲಿಯವರೆಗೆ 1,240 ಮಂದಿ ಮೃತಪಟ್ಟಿದ್ದಾರೆ.
ವಿಜಯಪುರ:ಜಿಲ್ಲೆಯಲ್ಲಿ ಇಂದು ಕೊರೊನಾ ರಣಕೇಕೆ ಹಾಕಿದ್ದು, ಇದೇ ಮೊದಲ ಬಾರಿ ಒಂದೇ ದಿನ 176 ಪ್ರಕರಣ ದೃಢಪಡುವ ಮೂಲಕ ದಾಖಲೆ ಬರೆದಿದೆ. ಇಲ್ಲಿಯವರೆಗೆ ಒಟ್ಟು ಸೋಂಕಿತರ ಸಂಖ್ಯೆ 1,414ಕ್ಕೆ ಏರಿಕೆಯಾಗಿದೆ. 103 ಗುಣಮುಖರಾಗಿದ್ದು, ಒಟ್ಟು 906 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಎರಡು ದಿನಗಳಲ್ಲಿ ಒಟ್ಟು 48 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಸೋಂಕಿತರ ಸಂಖ್ಯೆ 629ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 243 ಜನರು ಗುಣಮುಖರಾಗಿದ್ದಾರೆ. ಒಟ್ಟು 357 ಸಕ್ರಿಯ ಪ್ರಕರಣಗಳಿವೆ.
ಚಿತ್ರದುರ್ಗ:ಜಿಲ್ಲೆಯಲ್ಲಿಂದು 23 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಒಟ್ಟು 354 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 23 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇದುವರೆಗೆ ಮೂವರು ಮೃತಪಟ್ಟಿದ್ದು, ಸೋಂಕಿತರ ಪೈಕಿ ಈಗಾಗಲೆ 103 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 93 ಸಕ್ರಿಯ ಪ್ರಕರಣಗಳು ಇವೆ.
ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದೇ ದಿನ 186 ಜನರಿಗೆ ಸೋಂಕು ತಗುಲಿದ್ದು, ಇದರಿಂದ ಸೋಂಕಿತರ ಸಂಖ್ಯೆ 1917ಕ್ಕೆ ಏರಿಕೆಯಾಗಿದೆ. ಒಂದೇ ದಿನ ಕೊರೊನಾದಿಂದ 6 ಜನ ಸೋಂಕಿತರು ಮೃತಪಟ್ಟಿದ್ದು, ಇದರಿಂದ ಮೃತರ ಸಂಖ್ಯೆ 58ಕ್ಕೇರಿದೆ. ಇಂದು ಕೂಡಾ 50 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 643 ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 1,216 ಸಕ್ರೀಯ ಪ್ರಕರಣಗಳಿವೆ.
ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು, ಮೂವರನ್ನು ಬಲಿ ಪಡೆದು 137 ಜನರಿಗೆ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಕೊರೊನಾಗೆ ಈವರೆಗೂ 24 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 926ಕ್ಕೇರಿಕೆಯಾಗಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಿಂದ ಇಂದು 27 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 404 ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಸದ್ಯ 498 ಕೊರೊನಾ ಪಾಸಿಟಿವ್ ಸಕ್ರಿಯ ಕೇಸ್ಗಳಿವೆ.
ಶಿವಮೊಗ್ಗ: ಇಂದು 49 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಒಂದೇ ದಿನ 83 ಜನ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ. ಇದುವರೆಗೂ ಒಟ್ಟು 400 ಜನ ಗುಣಮುಖರಾಗಿದ್ದಾರೆ. ಇಂದು ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 397 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.