ಕರ್ನಾಟಕ

karnataka

By

Published : Jul 21, 2020, 7:56 PM IST

ETV Bharat / state

ಕರ್ನಾಟಕದಲ್ಲಿ ಇಂದು ಕೊರೊನಾಗೆ 61 ಬಲಿ: 3,649 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಒಂದೇ ದಿನ 61 ಮಂದಿ ಕೊರೊನಾ ವೈರಸ್​ಗೆ ಬಲಿಯಾಗಿದ್ದಾರೆ.

corona updates in karnataka
ಕೊರೊನಾ ಮರಣ ಮೃದಂಗ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ ಒಟ್ಟು 3,649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ. ಒಂದೇ ದಿನ 61 ಮಂದಿ ಕೊರೊನಾಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,464ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರವೊಂದರಲ್ಲೇ 1714 ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ 1,664 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 25,459 ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ.

ABOUT THE AUTHOR

...view details