ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ನಾಳೆಯಿಂದ ಕೊರೊನಾ ವ್ಯಾಕ್ಸಿನ್ ಡ್ರೈ ರನ್ - ಕೊರೊನಾ ವ್ಯಾಕ್ಸಿನ್ ಡ್ರೈ ರನ್

ತಾಲೀಮು ನಡೆಸಿರುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಲಸಿಕೆ ನೀಡಲು ನಗರದಲ್ಲಿ ಒಟ್ಟು 1,517 ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜನವರಿ ಅಂತ್ಯದ ವೇಳೆಗೆ ಮತ್ತು ಫೆಬ್ರವರಿ ಮೊದಲ ವಾರದಲ್ಲಿ ಲಸಿಕೆ ನೀಡುವ ಕಾರ್ಯ ಪ್ರಾರಂಭಿಸಲು ಯೋಜಿಸಲಾಗಿದೆ..

Corona vaccine dry run
ಬೆಂಗಳೂರಿನಲ್ಲಿ ನಾಳೆ ಕೊರೊನಾ ವ್ಯಾಕ್ಸಿನ್ ಡ್ರೈ ರನ್

By

Published : Jan 1, 2021, 2:59 PM IST

Updated : Jan 1, 2021, 3:28 PM IST

ಬೆಂಗಳೂರು :ನಗರದಲ್ಲಿ ಕೋವಿಡ್ ಲಸಿಕಾ ವಿತರಣೆಗೆ ಸಿದ್ಧತೆ ಆರಂಭವಾಗಿದೆ. ನಾಳೆ ಬಿಬಿಎಂಪಿ ವ್ಯಾಪ್ತಿಯ 2 ಆರೋಗ್ಯ ಕೇಂದ್ರ ಹಾಗೂ ಬೆಂಗಳೂರು ನಗರ ಹೊರವಲಯ ವ್ಯಾಪ್ತಿಯ 1 ಕೇಂದ್ರದಲ್ಲಿ ಲಸಿಕಾ ತಾಲೀಮು ನಡೆಯಲಿದೆ ಎಂದು ಬಿಬಿಎಂಪಿ ಆಡಳಿತಗಾರರಾದ ಗೌರವ್ ಗುಪ್ತಾ ಹೇಳಿದರು.

ಬೆಂಗಳೂರಿನಲ್ಲಿ ನಾಳೆಯಿಂದ ಕೊರೊನಾ ವ್ಯಾಕ್ಸಿನ್ ಡ್ರೈ ರನ್

ನಾಳೆ ಎಲ್ಲಾ ರಾಜ್ಯಗಳಲ್ಲಿಯೂ ಕೊರೊನಾ ಲಸಿಕೆಯ ಡ್ರೈ ರನ್ ನಡೆಯಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕೆ ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆ‌ ತಾಲೀಮು ನಡೆಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗೆ ಇಂದು ತರಬೇತಿ ಕಾರ್ಯ ನಡೆಯಲಿದೆ.

ಪಾಲಿಕೆ ವ್ಯಾಪ್ತಿಯ 2 ಕಡೆ ದಕ್ಷಿಣ ವಲಯದ ವಿದ್ಯಾಪೀಠದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ, ಪಶ್ಚಿಮ ವಲಯದ ಕಾಮಾಕ್ಷಿಪಾಳ್ಯದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ಬೆಂಗಳೂರು ನಗರ ಗ್ರಾಮಾಂತರ ಆನೇಕಲ್ ಭಾಗದ ಹರ್ಗಾದೆಯಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು ನಡೆಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ನಾಳೆಯಿಂದ ಐದು ಜಿಲ್ಲೆಗಳಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈ ರನ್ : ಸಚಿವ ಡಾ. ಸುಧಾಕರ್

ಎರಡು ತಾಸು ಲಸಿಕೆ ತಾಲೀಮು ನಡೆಯಲಿದೆ. ಪ್ರತಿ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ 25 ಮಂದಿ ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ. 3 ಸಾರ್ವಜನಿಕ ಆರೋಗ್ಯ ಕೇಂದ್ರಗಳಿಂದ 75 ಕಾರ್ಯಕರ್ತರಿಗೆ ಲಸಿಕೆ ತಾಲೀಮು ನಡೆಸಲಾಗುತ್ತದೆ.

ತಾಲೀಮು ನಡೆಸಿರುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಲಸಿಕೆ ನೀಡಲು ನಗರದಲ್ಲಿ ಒಟ್ಟು 1,517 ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜನವರಿ ಅಂತ್ಯದ ವೇಳೆಗೆ ಮತ್ತು ಫೆಬ್ರವರಿ ಮೊದಲ ವಾರದಲ್ಲಿ ಲಸಿಕೆ ನೀಡುವ ಕಾರ್ಯ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

Last Updated : Jan 1, 2021, 3:28 PM IST

ABOUT THE AUTHOR

...view details