ಹೊಸಕೋಟೆ: ನವದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ನಡೆದ ತಬ್ಲಿಘಿ ಜಮಾತ್ನಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವ್ಯಕ್ತಿಯಲ್ಲಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ಕಾಲಿಟ್ಟ ಕೊರೊನಾ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿ ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ.
ಈ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ಕೊರೊನಾ ವೈರಸ್ ಕಾಲಿಟ್ಟಿದೆ. ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದ 43 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಪ್ರಸ್ತುತ ಈ ವ್ಯಕ್ತಿ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವ್ಯಕ್ತಿಯನ್ನು ಮಾರ್ಚ್ 31ರಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಹೋಂ ಕ್ವಾರಂಟೈನ್ಗೆ ಸೂಚಿಸಲಾಗಿತ್ತು. ನಂತರ ಏಪ್ರಿಲ್ 5ರಂದು ರಕ್ತ ಪರೀಕ್ಷೆ ಮಾಡಿದಾಗ ಈ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.