ಬೆಂಗಳೂರು: ಕೆಲವು ಪೊಲೀಸರು ಕೊರೊನಾ ಸೋಂಕಿಗೆ ಒಳಗಾಗುತ್ತಿರುವ ಹಿನ್ನೆಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸಿಬ್ಬಂದಿ ಜಾಗೃತಿಯಿಂದ ಕಾರ್ಯನಿರ್ವಹಿಸುವಂತೆ ಕಿವಿ ಮಾತು ಹೇಳಿದ್ದಾರೆ.
ಸಿಲಿಕಾನ್ ಸಿಟಿ ಪೊಲೀಸರನ್ನೂ ಕಾಡುತ್ತಿರುವ ಕೊರೊನಾ: ಸಿಬ್ಬಂದಿಯಲ್ಲಿ ಶುರುವಾದ ನಡುಕ - bangalore news
ಕೊರೊನಾ ಮಹಾಮಾರಿ ಪೊಲೀಸರನ್ನೂ ಕಾಡುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಕೆಲವು ಪೊಲೀಸರು ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಎಲ್ಲ ಸಿಬ್ಬಂದಿ ಜಾಗೃತಿಯಿಂದ ಕೆಲಸ ಮಾಡಬೇಕೆಂದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹಾಗೂ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ.
ನಿನ್ನೆ ಡಿಜಿ ಕಚೇರಿಯ ಓರ್ವ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆ, ಅವರ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ, 20 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. 20 ಜನರ ಸ್ವಾಬ್ ಸ್ಯಾಂಪಲ್ಸ್ ಪರೀಕ್ಷೆಗೆ ಕಳುಹಿಸಲಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬುಲೆಟಿನ್ಗೆ ಪೊಲೀಸರು ಕಾಯುತ್ತಿದ್ದಾರೆ. ಒಂದು ವೇಳೆ, 20 ಜನರಿಗೂ ಕೊರೊನಾ ಇರುವುದು ದೃಢವಾದರೆ, ಹಿರಿಯ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಕಾರಣ ನೃಪತುಂಗ ರಸ್ತೆ ಬಳಿ ಇರುವ ಡಿಜಿ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸೇರಿದಂತೆ ಎಡಿಜಿಪಿಗಳು ಇದ್ದಾರೆ.
ಮತ್ತೊಂದೆಡೆ, ಜೆಜೆ ಆರ್. ನಗರ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಹೆಡ್ ಕಾನ್ಸ್ಟೇಬಲ್ ಜೊತೆ ಯಾರೆಲ್ಲಾ ಸಂಪರ್ಕದಲ್ಲಿದ್ದರೋ, ಅವರನ್ನ ಕ್ವಾರಂಟೈನ್ ಮಾಡಲು ಆರೋಗ್ಯಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಇನ್ನು ಪಾದರಾಯನಪುರ ಹತ್ತಿರ ಜೆ.ಜೆ ನಗರ ಠಾಣೆ ಇರುವ ಕಾರಣ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಲಾಗಿದೆ. ಸದ್ಯ ಸಿಲಿಕಾನ್ ಸಿಟಿಯ ನಾಲ್ಕೈದು ಪೊಲೀಸರಲ್ಲಿ ಸೋಂಕು ಪತ್ತೆಯಾದ ಕಾರಣ ಇತರ ಸಿಬ್ಬಂದಿಯಲ್ಲೂ ಆತಂಕ ಶುರುವಾಗಿದೆ.