ಬೆಂಗಳೂರು:ಬೆಂಗಳೂರು ಮೆಡಿಕಲ್ ಕಾಲೇಜಿನ ಪಿಜಿ ವೈದ್ಯ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸಾಕಷ್ಟು ವಿದ್ಯಾರ್ಥಿಗಳು ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ ಎನ್ನುವ ಆತಂಕ ವ್ಯಕ್ತವಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಕಂಟ್ರೋಲ್ ರೂಮ್ನಲ್ಲಿ ರೋಗಿಗಳ ಎಂಟ್ರಿ ಹಾಗೂ ಡಿಸ್ಜಾರ್ಜ್ ಬಗ್ಗೆ ಮಾಹಿತಿ ಪಡೆಯುತ್ತಿದ್ದ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ವಿದ್ಯಾರ್ಥಿಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ಇದರ ಜೊತೆಗೆ ಬೆಂಗಳೂರು ಮೆಡಿಕಲ್ ಕಾಲೇಜು ಡೀನ್ ಕೂಡ ಇವರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರೇ? ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ದೊರೆಯಬೇಕಿದೆ. ವಿದ್ಯಾರ್ಥಿಗಳೊಂದಿಗೆ ಎಷ್ಟು ಜನ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂಬುದರ ಪತ್ತೆ ಕಾರ್ಯವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ.
ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರು ಸೋಂಕಿಗೆ ಬಲಿ: