ಕರ್ನಾಟಕ

karnataka

By

Published : Jul 15, 2020, 12:11 AM IST

ETV Bharat / state

ವಿಕಾಸಸೌಧದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು : ಆತಂಕದಲ್ಲಿ ನೌಕರರು

ವಿಕಾಸಸೌಧದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉದ್ಯೋಗಿ ಹಾಗೂ ಪಶು ಸಂಗೋಪನಾ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ವಿಕಾಸಸೌಧದಲ್ಲಿನ ನಾಲ್ಕನೇ ಮಹಡಿಯಲ್ಲಿರುವ ಎರಡೂ ಕಚೇರಿಗಳನ್ನು ಸೀಲ್​ಡೌನ್ ಮಾಡಲಾಗಿದೆ.

dsdsd
ವಿಕಾಸಸೌಧದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಇದೀಗ ವಿಕಾಸಸೌಧದಲ್ಲಿ ಕಾರ್ಯನಿರ್ವಸುವ ಮತ್ತಿಬ್ಬರಿಗೆ ಸೋಂಕು ತಗುಲಿದೆ.

ವಿಕಾಸಸೌಧದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉದ್ಯೋಗಿ ಹಾಗೂ ಪಶು ಸಂಗೋಪನಾ ಇಲಾಖೆಯ ಮಹಿಳಾ ಉದ್ಯೋಗಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ವಿಕಾಸಸೌಧದಲ್ಲಿನ ನಾಲ್ಕನೇ ಮಹಡಿಯಲ್ಲಿರುವ ಎರಡೂ ಕಚೇರಿಗಳನ್ನು ಸೀಲ್​ಡೌನ್ ಮಾಡಲಾಗಿದೆ. ಅಲ್ಲದೇ, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ನಡುವೆ, ಲಾಕ್​ಡೌನ್ ವೇಳೆ ಸರ್ಕಾರವೇ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿಲ್ಲ. ಸಚಿವಾಲಯದ ಸಿಬ್ಬಂದಿಯಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರು ಇದ್ದಾರೆ ಮತ್ತು ಹಲವು ರೀತಿಯ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಇದ್ದಾರೆ. ಅವರನ್ನೆಲ್ಲ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಅವರನ್ನು ಸರಿಯಾಗಿ ವಿಂಗಡನೆ ಮಾಡದೆ ತಾರತಮ್ಯ ಮಾಡಲಾಗುತ್ತಿದೆ. ತಾರತಮ್ಯ ಮುಂದುವರೆದರೆ ಸಿಬ್ಬಂದಿ ಸಾಮೂಹಿಕ ರಜೆ ಹಾಕಿ ಮನೆಯಲ್ಲಿರಬೇಕಾಗುತ್ತದೆ ಅಥವಾ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸಚಿವಾಲಯದ ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ಒಂದು ಸಭೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ವಿಧಾನಸೌಧದಲ್ಲಿ ಫೀವರ್ ಕ್ಲಿನಿಕ್ ಮಾಡಬೇಕು ಎಂಬ ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಕೋವಿಡ್ ಪರೀಕ್ಷೆ ಮಾಡುವ ಕ್ಯಾಂಪ್ ಮಾಡಬೇಕಿತ್ತು. ಅದನ್ನು ಮಾಡಿಲ್ಲ. ಸುಮಾರು 20 ಇಲಾಖೆಗಳನ್ನು ಅಗತ್ಯ ಸೇವೆ ಕಾಯ್ದೆಯಡಿ ತರಲಾಗಿದೆ. ಅದರ ಜೊತೆಗೆ ಕೋವಿಡ್ ಕರ್ತವ್ಯಕ್ಕೂ ನಿಯೋಜನೆ ಮಾಡಲಾಗುತ್ತಿದೆ. ಇಂತಹ ಕಿರುಕುಳ ಆಗಬಾರದು ಎಂದು ಅವರು ಹೇಳಿದ್ದಾರೆ.

ABOUT THE AUTHOR

...view details