ಕರ್ನಾಟಕ

karnataka

ETV Bharat / state

ಹೊಸ ವರ್ಷಾಚರಣೆ: ಎಂಜಿ, ಬ್ರಿಗೇಡ್ ರಸ್ತೆಯಲ್ಲಿ 8 ಮೆಟ್ರಿಕ್ ಟನ್ ತ್ಯಾಜ್ಯ ತೆರವುಗೊಳಿಸಿದ ಪಾಲಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಯಿಂದ ಶೇಖರಣೆ ಆಗಿದ್ದ 8 ಮೆಟ್ರಿಕ್ ಟನ್ ತ್ಯಾಜ್ಯವನನ್ನು ಪಾಲಿಕೆ ತೆರವುಗೊಳಿಸಿದೆ.

ಬಿಬಿಎಂಪಿ
ಬಿಬಿಎಂಪಿ

By ETV Bharat Karnataka Team

Published : Jan 1, 2024, 5:56 PM IST

ಬೆಂಗಳೂರು : ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 8 ಮೆಟ್ರಿಕ್ ಟನ್ ತ್ಯಾಜ್ಯ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ.

ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.30ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 6.30ರ ವೇಳೆಗೆ ಪೂರ್ಣಗೊಳಿಸಲಾಗಿದೆ. ಸುಮಾರು 8 ಮೆಟ್ರಿಕ್​ ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಶಸ್ವಿಯಾಗಿದೆ.

ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ ಮಾಡಲಾಗಿದ್ದು, 3 ಮೇಲ್ವಿಚಾರಕರು, 80ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯವನ್ನು ಮಾಡಿದ್ದಾರೆ. 1 ಕಾಂಪ್ಯಾಕ್ಟರ್ ಹಾಗೂ 7 ಆಟೋ ಟಿಪ್ಪರ್ ಬಳಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮದ್ಯದ ಬಾಟಲಿಗಳು ಸೇರಿದಂತೆ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಸಲಾಗಿದೆ.

ಪುನರ್ ಬಳಕೆಯ ಸುನಾರು 2 ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಅಪ್ಪುರಾಜ್, ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :ಹಳೇ ಪದ್ಧತಿಗೆ ಬ್ರೇಕ್​; ಮಾದರಿಯಾಗಿ ಹೊಸ ವರ್ಷ ಬರಮಾಡಿಕೊಂಡ ಬೆಂಗಳೂರು ಪೊಲೀಸರು

ABOUT THE AUTHOR

...view details