ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಅನುದಾನ ದುರ್ಬಳಕೆ ಮಾಡಿಕೊಂಡು ಭಾರಿ ಭ್ರಷ್ಟಾಚಾರ ಎಸಗಿರುವ ಆರೋಪ ಬೆಂಗಳೂರು ನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್ ವಿರುದ್ಧ ಕೇಳಿ ಬಂದಿದೆ. ಇಲಾಖೆಯ ಅನುದಾನವನ್ನು ಸೂಕ್ತವಾಗಿ ಬಳಸಿಕೊಳ್ಳದೇ ಶಿವಕುಮಾರ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಇಂದು ಸಂಪಂಗಿ ರಾಮನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಎದುರು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಭ್ರಷ್ಟಾಚಾರದಲ್ಲಿ ತೊಡಗಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್ ವಿರುದ್ದ ಗಭೀರವಾಗಿ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು.
ಇದನ್ನೂ ಓದಿ :ಗ್ಯಾರಂಟಿ ಜಾರಿ ಸಂಬಂಧ ಸಿಎಂ ಮಹತ್ವದ ಸಭೆ: ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 12,038 ಕೋಟಿ ಹೊರೆ?
ಪ್ರತಿಭಟನೆ ಬಳಿಕ ಮಾತನಾಡಿದ ಮಾವಳ್ಳಿ ಶಂಕರ್ ಅವರು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳನ್ನು ನಂಬಿ ರಾಜ್ಯದ ಮೂಲೆ ಮೂಲೆಯಿಂದ ಶಿಕ್ಷಣ ಪಡೆಯಲು ಬಡ ವಿದ್ಯಾರ್ಥಿಗಳು ಬೆಂಗಳೂರಿಗೆ ಬರುತ್ತಾರೆ. ಉದ್ಯೋಗ ಅರಸಿ ಮಹಿಳೆಯರು ಬಂದು ನೆಲೆಸುತ್ತಾರೆ. ಆದರೆ, ಇಲಾಖೆಯ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಶಿವಕುಮಾರ್, ಕಾಮಗಾರಿಯಿಂದ ಹಿಡಿದು ಹಾಸ್ಟೆಲ್ ಊಟದಲ್ಲಿಯೂ ಅಕ್ರಮ ಎಸಗುತ್ತಿದ್ದಾರೆ. ಈ ಕುರಿತು ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮಾಹಿತಿಯನ್ನು ಕಲೆಹಾಕಿಯೇ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.