ಬೆಂಗಳೂರು:ಹುಬ್ಬಳ್ಳಿ ಗಲಭೆ ವಿಚಾರವಾಗಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದೆ. ಜಿಹಾದ್ ಬೆಂಬಲಿಸೋ ಕಾಂಗ್ರೆಸ್ ಎಂದು ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದೆ. ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ. ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನವಾಗಿದೆ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ, ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ, ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನ ಎನ್ನುವ ಅಂಕಿಅಂಶ ಉಲ್ಲೇಖಿಸಿ ಕಾಂಗ್ರೆಸ್ ಸಪೋರ್ಟ್ಸ್ ಜಿಹಾದ್ ಹ್ಯಾಷ್ ಟ್ಯಾಗ್ನೊಂದಿಗೆ ಟ್ವೀಟ್ ಮಾಡಿದೆ.