ಬೆಂಗಳೂರು :ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ. ಏಳು ಸ್ಥಾನಗಳಿಗ ಜೂನ್ 3ರಂದು ನಡೆಯಬೇಕಾಗಿದ್ದ ಚುನಾವಣೆಗೆ ಬಿಜೆಪಿಯಿಂದ ನಾಲ್ಕು, ಕಾಂಗ್ರೆಸ್ನಿಂದ ಇಬ್ಬರು ಹಾಗೂ ಜೆಡಿಎಸ್ನಿಂದ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದರು.