ಕರ್ನಾಟಕ

karnataka

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ: ಯಾರಿಗೆ ತೆರೆಯಲಿದೆ ಪರಿಷತ್​ ಬಾಗಿಲು?

By

Published : Jun 15, 2022, 7:12 AM IST

ವಿಧಾನ ಪರಿಷತ್​ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ

Council Graduate and Teachers' Constituency Elections Results today
ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ಫಲಿತಾಂಶ

ಬೆಂಗಳೂರು:ವಿಧಾನ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಒಟ್ಟು 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಜೂನ್ 13ರಂದು ನಡೆದ ಚುನಾವಣೆಯಲ್ಲಿ ಶೇಕಡಾ 74.39ರಷ್ಟು ಮತದಾನವಾಗಿದೆ.

ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ವಿಧಾನಪರಿಷತ್ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ಪ್ರಕಾಶ್​ ಹುಕ್ಕೇರಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ಪ್ರತಿ ಮತ ಎಣಿಕೆ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಹಾಗೂ ಶಾಯಿ ಪೆನ್‌ ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಇದೇ ರೀತಿ ನೀರಿನ ಬಾಟಲ್ ತೆಗೆದುಕೊಂಡು ಹೋಗುವುದನ್ನು ಕೂಡ ನಿರ್ಬಂಧಿಸಲಾಗಿದೆ. ಮಾಸ್ಕ್ ಧರಿಸಿ ಬರುವುದು ಕಡ್ಡಾಯವಾಗಿದ್ದು, ನಿಗದಿತ ಪಾರ್ಕಿಂಗ್‌ ಸ್ಥಳದಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ. ಸಾಯಂಕಾಲದ ವೇಳೆ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಡ್ರಿಲ್

ABOUT THE AUTHOR

...view details