ಬೆಂಗಳೂರು:ವಿಧಾನ ಪರಿಷತ್ ಕಲಾಪ ಮಂಗಳವಾರದವರೆಗೂ ನಡೆಯಲಿದ್ದು, ಕಡೆಯ ದಿನ ನೂತನ ಸಭಾಪತಿ ಆಯ್ಕೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿ ನೂತನ ಸಭಾಪತಿ ಸಂಬಂಧ ಚರ್ಚೆ ನಡೆಸಲಾಗುತ್ತದೆ. ಸಭಾಪತಿ ಯಾರಾಗಬೇಕೆಂಬ ಬಗ್ಗೆ ಸಿಎಂ ನಾಳೆ ನಿರ್ಧಾರ ಮಾಡಲಿದ್ದಾರೆ ಎಂದರು.