ಬೆಂಗಳೂರು: ಆರೋಪಿಗಳ ಪರ ವಕಾಲತ್ತು ಹಾಕದಂತೆ ನಿರ್ಣಯ ಕೈಗೊಳ್ಳುವ ವಕೀಲರ ಸಂಘಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಆದೇಶಿಸಿದೆ.
ಕಳೆದ ವರ್ಷ ಮೈಸೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಭಿತ್ತಿ ಪತ್ರ ಪ್ರದರ್ಶನ ಮಾಡಿದ್ದ ಪ್ರಕರಣದಲ್ಲಿ ಆರೋಪಿ ನಳಿನಿ ಬಾಲಕುಮಾರ್ ಪರ ವಕಾಲತ್ತು ಹಾಕದಂತೆ ಮೈಸೂರು ಜಿಲ್ಲಾ ವಕೀಲರ ಸಂಘ ನಿರ್ಣಯ ಕೈಗೊಂಡಿದೆ ಎಂದು ಆರೋಪಿಸಿ ತುಮಕೂರಿನ ವಕೀಲ ರಮೇಶ್ ಎಲ್. ನಾಯಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಎ.ಎಸ್. ಮೊಹಮ್ಮದ್ ರಫಿ ವರ್ಸಸ್ ಸ್ಟೇಟ್ ಆಫ್ ತಮಿಳುನಾಡು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಸಾರಾಂಶ ಉಲ್ಲೇಖಿಸಿರುವ ಹೈಕೋರ್ಟ್, ವಕೀಲರ ಸಂಘಗಳು ಆರೋಪಿಗಳ ಪರ ವಕಾಲತ್ತು ಹಾಕದಂತೆ ನಿರ್ಣಯ ಕೈಗೊಳ್ಳುವುದು ಕಾನೂನು ಬಾಹಿರ ಕ್ರಮವಾಗುತ್ತದೆ.