ಕರ್ನಾಟಕ

karnataka

ETV Bharat / state

ನಟ ಸುದೀಪ್​ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ - ಮಾನಹಾನಿಕಾರಕ ಹೇಳಿಕೆ

ನಿರ್ಮಾಪಕರಾದ ಎಂ.ಎನ್.ಸುರೇಶ್​, ಎಂ.ಎನ್.ಕುಮಾರ್​ ಅವರು ನಟ ಸುದೀಪ್​ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ ವಿಧಿಸಿದೆ.

ನಟ ಸುದೀಪ್​
ನಟ ಸುದೀಪ್​

By ETV Bharat Karnataka Team

Published : Aug 21, 2023, 8:04 PM IST

ಬೆಂಗಳೂರು : ನಟ ಸುದೀಪ್​ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನಗರದ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ ನಿರ್ಬಂಧ ವಿಧಿಸಿ ಇಂದು ಆದೇಶಿಸಿದೆ. ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಲು ಕೋರಿ ಸುದೀಪ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 11ನೇ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶರು ಈ ಆದೇಶ ಹೊರಡಿಸಿದರು.

ಅಲ್ಲದೆ, ಪ್ರತಿವಾದಿಗಳಾದ ಚಿತ್ರನಿರ್ಮಾಪಕರಾದ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು, ಅವರ ಸಹವರ್ತಿಗಳು ಮತ್ತಿತರರು ಸೇರಿದಂತೆ ಅರ್ಜಿದಾರ ಸುದೀಪ್​ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡಬಾರದು ಸೂಚನೆ ನೀಡಿ, ವಿಚಾರಣೆ ಮುಂದೂಡಿದೆ. ಪ್ರಕರಣ ಸಂಬಂಧ ಈ ಹಿಂದಿನ ವಿಚಾರಣೆಯಲ್ಲಿ ಸುದೀಪ್​ ಅವರು ಇಬ್ಬರೂ ನಿರ್ಮಾಪಕರು ತಮ್ಮ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಇದಕ್ಕಾಗಿ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಖಾಸಗಿ ದೂರು ವಿಚಾರವಾಗಿ ಸುದೀಪ್ ಪ್ರಮಾಣೀಕೃತ ಹೇಳಿಕೆ ದಾಖಲಿಸಿದ್ದರು.

ಇದನ್ನೂ ಓದಿ:Sudeep: ಸುದೀಪ್​ ವಿರುದ್ಧ ಮಾನಹಾನಿ ಆರೋಪ: ಇಬ್ಬರು ಸಿನಿಮಾ ನಿರ್ಮಾಪಕರಿಗೆ ಸಮನ್ಸ್ ಜಾರಿ

ಹೆಸರು, ವರ್ಚಸ್ಸಿಗೆ ಧಕ್ಕೆ: ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ತಮ್ಮ ವಕೀಲರೊಂದಿಗೆ ಗುರುವಾರ ವಿಚಾರಣೆಗೆ ಹಾಜರಾಗಿದ್ದ ಸುದೀಪ್, ಎಂ.ಎನ್ ಕುಮಾರ್ ಮತ್ತು ಎಂ.ಎನ್.ಸುರೇಶ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ತಮಗೆ ಹಣದ ನೆರವು ನೀಡಿರುವುದಾಗಿ ಸುದ್ದಿಗೋಷ್ಠಿ ನಡೆಸಿ ಸುಳ್ಳು ಹೇಳಿದ್ದಾರೆ. ಇದರಿಂದ ಹಲವರು ತಮ್ಮನ್ನು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ 22 ವರ್ಷಗಳಿಂದ ಚಿತ್ರರಂಗದಲ್ಲಿ ಕಷ್ಟಪಟ್ಟು ಗಳಿಸಿದ್ದ ಹೆಸರು ಹಾಗೂ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬುದೂ ಸೇರಿದಂತೆ ಖಾಸಗಿ ದೂರಿನಲ್ಲಿ ಉಲ್ಲೇಖಿಸಿರುವ ವಿಚಾರಗಳ ಬಗ್ಗೆ ಪ್ರಮಾಣೀಕೃತ ಹೇಳಿಕೆ ದಾಖಲಿಸಿ, ಕೆಲವೊಂದು ದಾಖಲೆ ಒದಗಿಸಿದ್ದರು.

ಇದನ್ನೂ ಓದಿ:ನಿರ್ಮಾಪಕ​ ಕುಮಾರ್​ ಅವರಿಂದ ಸುದೀಪ್ ಒಂದು ರೂಪಾಯಿಯನ್ನೂ ಪಡೆದಿಲ್ಲ: ಪ್ರಕರಣದ ಬಗ್ಗೆ ಜಾಕ್ ಮಂಜು ಮಾಹಿತಿ

ಮಾನಹಾನಿ ಮಾಡಿದವರಿಗೆ ಪಾಠ ಕಲಿಸಬೇಕಿದೆ: ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನಿರ್ಮಾಪಕರು ಕ್ಷಮೆ ಕೋರಿದರೆ ಅವರನ್ನು ಕ್ಷಮಿಸುವಿರಾ? ಅವರೊಂದಿಗೆ ರಾಜಿ ಸಂಧಾನ ಮಾಡಿಕೊಳ್ಳುವಿರಾ? ಎಂದು ಸುದೀಪ್‌ಗೆ ಕೇಳಿದರು. ಈ ಪ್ರಶ್ನೆಗೆ ಸುದೀಪ್ ಯಾವುದೇ ಹೇಳಿಕೆ ನೀಡದಿದ್ದರೂ, ಅವರ ಪರ ವಕೀಲರು ಉತ್ತರಿಸಿ, ಯಾವುದೇ ರೀತಿಯಲ್ಲಿಯೂ ರಾಜಿ ಸಂಧಾನ ಮಾಡಿಕೊಳ್ಳುವುದಿಲ್ಲ. ಈ ರೀತಿ ಮಾನಹಾನಿ ಮಾಡಿದವರಿಗೆ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ:ಕುಮಾರ್ - ಕಿಚ್ಚ ವಾರ್: ನಿರ್ಮಾಪಕರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ನಟ ಸುದೀಪ್

ABOUT THE AUTHOR

...view details