ಕರ್ನಾಟಕ

karnataka

ETV Bharat / state

ಅಪ್ರಾಪ್ತೆಯರ ಮೇಲಿನ ದೌರ್ಜನ್ಯ ಪ್ರಕರಣ, ತನಿಖಾ ವರದಿ ಸಲ್ಲಿಸಲು ಸರ್ಕಾರಕ್ಕೆ ಕೋರ್ಟ್​ ಸೂಚನೆ - Court instructs government to submit investigation report

ಕೆಂಗೇರಿಯ ಅನಾಥಾಶ್ರಮವೊಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಆರೋಪ ಸಂಬಂಧ ಕೇಂಗೇರಿ ಠಾಣೆಯ  ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ‌ .

ಸರ್ಕಾರಕ್ಕೆ ಕೋರ್ಟ್​ ಸೂಚನೆ

By

Published : Aug 13, 2019, 8:01 PM IST

ಬೆಂಗಳೂರು: ಕೆಂಗೇರಿಯ ಅನಾಥಾಶ್ರಮದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಆರೋಪ ಸಂಬಂಧ ಕೇಂಗೇರಿ ಠಾಣೆಯ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ‌ .

ಇನ್ನೂ ಎಸಿಪಿ ಮಟ್ಟದ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ನಗರ ಪೊಲೀಸ್ ಆಯುಕ್ತರಿಗೆ ಶಿಫಾರಸು ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ರಾಜ್ಯ ಸರ್ಕಾರದ ಪರ ವಕೀಲರು ತಿಳಿಸಿದರು.

ಈ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ, ಅಭಯ್ ಎಸ್ ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ನ್ಯಾಯ ಪೀಠದಲ್ಲಿ ನಡೆಯಿತು. ಕಳೆದ ವಿಚಾರಣೆ ವೇಳೆ ತನಿಖೆಯ ಪ್ರಗತಿಯ ವಿವರ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಈ ವೇಳೆ ಕೋರ್ಟ್​ ಸ್ಥಳೀಯ ಡಿಸಿಪಿ ವಿರುದ್ಧ ಯಾವುದೇ ಕ್ರಮ‌ ಜರುಗಿಸದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮುಂದಿನ ವಿಚಾರಣೆ ವೇಳೆ ತನಿಖೆಯ ಯಾವ ಮಟ್ಟದಲ್ಲಿ ನಡೆಯುತ್ತಿದೆ ಎಂದು ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿಕೆ ಮಾಡಿ ಮಾಡಲಾಗಿದೆ.

ಕೆಂಗೇರಿಯ ಬಳಿಯ ಅನಾಥಾಶ್ರಮದಲ್ಲಿ‌ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಆದರೆ ಬಾಲಕಿಯರ ಆರೋಗ್ಯ ತಪಾಸಣೆ ನಡೆಸಿಲ್ಲ ಮತ್ತು ತಪ್ಪಿತಸ್ಥರು ಯಾರು ಎನ್ನುವುದರ ತನಿಖೆಯನ್ನೂ ಸೂಕ್ತ ರೀತಿಯಲ್ಲಿ ನಡೆಸ್ತಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ABOUT THE AUTHOR

...view details